ರಾಯಚೂರು : ಅಕ್ರಮವಾಗಿ ಗೋವುಗಳನ್ನು ಸಾಗಿಸುವಾಗ ಗ್ರಾಮಸ್ಥರೇ ಪೊಲೀಸರಿಗೆ ಹಿಡಿದು ಒಪ್ಪಿಸಿದ ಘಟನೆ ಜಿಲ್ಲೆಯ ದೇವರಭೂಪುರ ಗ್ರಾಮದಲ್ಲಿ ನಡೆದಿದೆ. ರಾತ್ರೋ ರಾತ್ರಿ ಯಾರಿಗೂ ಗೊತ್ತಾಗದಂತೆ ಹಟ್ಟಿ ಕಸಾಯಿಖಾನೆಗೆ ಗೋವುಗಳನ್ನು ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿದ ಗ್ರಾಮದ ಯುವಕರ ಗುಂಪೊಂದು ವಾಹನವನ್ನ ತಡೆದು ತಪಾಸಣೆ ನಡೆಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಧ್ಯರಾತ್ರಿ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ವಶಕ್ಕೆ ಪಡೆದು ವಾಹನದ ಮಾಲೀಕ ಹಾಗೂ ಡ್ರೈವರ್ ಮೇಲೆ ಪ್ರಕರಣ ದಾಖಲಿಸಿದ್ದಾರೆ.
PublicNext
01/05/2026 08:00 am
LOADING...