ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಕ್ಷಣಗಣನೆ - ನಿರ್ಬಂಧ ಜಾರಿ

ಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ಚುನಾವಣೆಯ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯು ಹೈಕೋರ್ಟ್ ಆದೇಶದಂತೆ ನಾಳೆ (ಶನಿವಾರ) ಬೆಳಿಗ್ಗೆ ನಗರದ ಐ.ಡಿ.ಎಸ್.ಜಿ. ಸರ್ಕಾರಿ ಕಾಲೇಜಿನಲ್ಲಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ಅವರು ಮುನ್ನೆಚ್ಚರಿಕಾ ಕ್ರಮವಾಗಿ ಮತ ಎಣಿಕೆ ಕೇಂದ್ರದ ಸುತ್ತಮುತ್ತಲ ಪ್ರದೇಶದಲ್ಲಿ ಬಿಗಿ ನಿರ್ಬಂಧಗಳನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ.

ಮತ ಎಣಿಕೆ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕೇಂದ್ರದಿಂದ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿರ್ಬಂಧಿಸಲಾಗಿದೆ ಹಾಗೂ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಜಿಲ್ಲಾಡಳಿತವು ಮುನ್ನೆಚ್ಚರಿಕಾ ಕ್ರಮವಾಗಿ ಮತ ಎಣಿಕೆ ಕೇಂದ್ರದ ಸಮೀಪವಿರುವ ಸೈಬರ್ ಕೆಫೆ ಹಾಗೂ ಝರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಸೂಚಿಸಿದೆ. ಇದರೊಂದಿಗೆ ವಿಜಯೋತ್ಸವ ಆಚರಿಸುವುದು, ಘೋಷಣೆಗಳನ್ನು ಕೂಗುವುದು ಮತ್ತು ಧ್ವನಿವರ್ಧಕಗಳ ಬಳಕೆಗೆ ತಡೆ ನೀಡಲಾಗಿದ್ದು, ಸಾರ್ವಜನಿಕ ಶಾಂತಿಗೆ ಧಕ್ಕೆ ತರುವ ಕೃತ್ಯಗಳ ಮೇಲೆ ಕಣ್ಣಿಡಲು ಸೈಬರ್ ವಿಭಾಗ ಮತ್ತು ಪೊಲೀಸರಿಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಅಹಿತಕರ ಘಟನೆಗಳು ಸಂಭವಿಸದಂತೆ ಇಡೀ ಪ್ರದೇಶದಲ್ಲಿ ಪೊಲೀಸ್ ಕಾವಲು ಹೆಚ್ಚಿಸಲಾಗಿದೆ.

Edited By :
PublicNext

PublicNext

01/05/2026 09:04 am

Cinque Terre

11.81 K

Cinque Terre

0

ಸಂಬಂಧಿತ ಸುದ್ದಿ