ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಮರು ಮತ ಎಣಿಕೆ ಹಿನ್ನಲೆ 'ಡ್ರೈ ಡೇ'

ಚಿಕ್ಕಮಗಳೂರು: ಮೇ 2 ರಂದು ನಗರದ ಐಡಿಎಸ್‍ಜಿ ಕಾಲೇಜು ಆವರಣದಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ನಡೆಯಲಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂದು ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಅಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಕಾಲೇಜಿನ ಸುತ್ತಮುತ್ತಲಿನ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಮದ್ಯ ತಯಾರಿಕೆ, ಸಾಗಣೆ ಮತ್ತು ಮಾರಾಟದ ಮೇಲೆ ಸಂಪೂರ್ಣ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ ಆದೇಶಿಸಿದ್ದಾರೆ. ಮರು ಮತ ಎಣಿಕೆ ಕಾರ್ಯವು ಅತ್ಯಂತ ಸೂಕ್ಷ್ಮವಾಗಿರುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ಶಿಫಾರಸಿನ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಅವಧಿಯಲ್ಲಿ ಸಾರ್ವಜನಿಕ ಶಾಂತಿಯನ್ನು ಕಾಯ್ದುಕೊಳ್ಳಲು ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ.

Edited By : PublicNext Desk
Kshetra Samachara

Kshetra Samachara

01/05/2026 02:03 pm

Cinque Terre

800

Cinque Terre

0

ಸಂಬಂಧಿತ ಸುದ್ದಿ