ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಬಾಳ್ಳುಪೇಟೆಯಲ್ಲಿ ಉಚಿತ ಆರೋಗ್ಯ ಶಿಬಿರಕ್ಕೆ ಭರ್ಜರಿ ಸ್ಪಂದನೆ - ಶಾಸಕರಿಂದ ಉದ್ಘಾಟನೆ

ಬಾಳ್ಳುಪೇಟೆ: ಗ್ರಾಮೀಣ ಜನರ ಆರೋಗ್ಯದ ಹಿತದೃಷ್ಟಿಯಿಂದ ಬಾಳ್ಳುಪೇಟೆಯ ಕೆಂಚಮ್ಮ ಮಲ್ಲೇಗೌಡರ ಸಮುದಾಯ ಭವನದಲ್ಲಿ ಆಯೋಜಿಸಲಾದ ಉಚಿತ ಆರೋಗ್ಯ ಶಿಬಿರವು ಭಾರೀ ಯಶಸ್ಸನ್ನು ಕಂಡಿತು.

ಸಕಲೇಶಪುರ ಮಂಡಲ ಬಿಜೆಪಿ ಉಪಾಧ್ಯಕ್ಷರಾದ ಸನ್ಮಾನ್ಯ ದೊಡ್ಡದಿಣೆ ಜಯಪ್ರಕಾಶ್ ಅವರ ನೇತೃತ್ವದಲ್ಲಿ ನಡೆದ ಈ ಶಿಬಿರವನ್ನು ಸಕಲೇಶಪುರದ ಶಾಸಕರಾದ Cement Manju ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರಿಗೆ ಇಂತಹ ಆರೋಗ್ಯ ಶಿಬಿರಗಳು ಅತ್ಯಂತ ಅವಶ್ಯಕವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕು ಎಂದು ಕರೆ ನೀಡಿದರು.

ಡಾ. ಲಕ್ಷ್ಮಣ್ ಗಂಗಾ ಅವರ ಮಾರ್ಗದರ್ಶನದಲ್ಲಿ ಮಂಗಳೂರಿನ Father Muller Hospital‌ನ ತಜ್ಞ ವೈದ್ಯರ ತಂಡ ಶಿಬಿರದಲ್ಲಿ ಭಾಗವಹಿಸಿ, ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಿ ಸೂಕ್ತ ಚಿಕಿತ್ಸೆ ಸಲಹೆಗಳನ್ನು ನೀಡಿದರು. ಅಗತ್ಯವಿರುವ ರೋಗಿಗಳಿಗೆ ಮುಂದಿನ ಚಿಕಿತ್ಸೆಗೆ ವಿಶೇಷ ವ್ಯವಸ್ಥೆಗಳನ್ನೂ ಮಾಡಿಕೊಡಲಾಯಿತು.

ಗ್ರಾಮೀಣ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗವನ್ನು ಪಡೆದುಕೊಂಡಿದ್ದು, ಕಾರ್ಯಕ್ರಮಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ. ಆರೋಗ್ಯ ಜಾಗೃತಿ ಮೂಡಿಸುವ ಹಾಗೂ ಬಡಜನರಿಗೆ ಚಿಕಿತ್ಸೆಯ ದಾರಿ ತೋರಿಸುವ ಈ ಶಿಬಿರವು ಸಮಾಜಮುಖಿ ಕಾರ್ಯವಾಗಿ ಗುರುತಿಸಿಕೊಂಡಿದೆ.

ಇಂತಹ ಜನೋಪಯೋಗಿ ಕಾರ್ಯಕ್ರಮಗಳು ಮುಂದುವರಿಯಲಿ ಎಂಬ ಆಶಯವನ್ನು ಸ್ಥಳೀಯರು ವ್ಯಕ್ತಪಡಿಸಿದರು.

Edited By : Vinayak Patil
Kshetra Samachara

Kshetra Samachara

01/05/2026 03:39 pm

Cinque Terre

2.52 K

Cinque Terre

0