ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಟ್ಟಣದಲ್ಲಿ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಸಿಹಿ ಹಂಚಿ ಸಂಭ್ರಮ

ಚಳ್ಳಕೆರೆ : ತಾಲ್ಲೂಕಿನ ನಾಯಕನಹಟ್ಟಿ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಕರ್ನಾಟಕ ಸ್ಟೇಟ್ ಕನ್ ಸ್ಟ್ರಕ್ಷನ್ ವರ್ಕರ್ ಸೆಂಟ್ರಲ್ ಯೂನಿಯನ್ ವತಿಯಿಂದ ಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮದಲ್ಲಿ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶ್ ಮಾತನಾಡಿದ ಅವರು ನಾಯಕನಹಟ್ಟಿ ಹೋಬಳಿಯ ಕಟ್ಟಡ ಹಾಗೂ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು ಕೂಡಿ ಸರ್ಕಾರದ ಆದೇಶದಂತೆ ಮೇ 1ರಂದು ಪ್ರತಿ ವರ್ಷ ಪಟ್ಟಣದಲ್ಲಿ ಕಾರ್ಮಿಕರ ದಿನಾಚರಣೆಯನ್ನು ಸಿಹಿ ಹಂಚಿ ಸಂಭ್ರಮದಿಂದ ಆಚರಿಸುತ್ತೇವೆ. ರಾಜ್ಯ ಸರ್ಕಾರ ಕಾರ್ಮಿಕರ ನೆರವಿಗೆ ಮುಂದಾಗಬೇಕು ಕಾರ್ಮಿಕರಿಗೆ ಮೂಲಭೂತ ಸೌಲಭ್ಯ ನೀಡಬೇಕು ಎಂದರು.

ಈ ಸಮಯದಲ್ಲಿ ಹೋಬಳಿ ಘಟಕ ಅಧ್ಯಕ್ಷ ಚನ್ನಬಸಯ್ಯನಹಟ್ಟಿ ಬಿ. ತಿಪ್ಪೇಸ್ವಾಮಿ ಮಾತನಾಡಿದರು ಪ್ರತಿ ವರ್ಷ ಮೇ ಒಂದರಂದು ಪಟ್ಟಣದಲ್ಲಿ ಕಾರ್ಮಿಕರ ದಿನಾಚರಣೆ ಆಚರಣೆ ಮಾಡುವುದು ಸಂತಸದ ವಿಷಯ ನಮ್ಮ ಕಾರ್ಮಿಕರು ಸಂಘಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.

Edited By : PublicNext Desk
Kshetra Samachara

Kshetra Samachara

01/05/2026 05:14 pm

Cinque Terre

1.12 K

Cinque Terre

0

ಸಂಬಂಧಿತ ಸುದ್ದಿ