ಚಳ್ಳಕೆರೆ,ಚಳ್ಳಕೆರೆ ಹಾಗೂ ಪರಶುರಾಂಪುರ ಮಧ್ಯದಲ್ಲಿ ಕಾರ್ಮಿಕರ ಮಕ್ಕಳಿಗಾಗಿ ಸುಮಾರು ₹45 ಕೋಟಿ ವೆಚ್ಚದಲ್ಲಿ ಶ್ರಮಿಕರ ವಸತಿ ಶಾಲೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಮತ್ತು ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ತಕ್ಷ ಟಿ ರಘುಮೂರ್ತಿ ಹೇಳಿದರು.
ನಗರದ ವಾಲ್ಮೀಕಿ ಕಲ್ಯಾಣ ಮಂಟಪದ ಬಳಿ ಎ ಐ ಟಿ ಯು ಸಿ ಸಂಘಟನೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಮಿಕರಿಗೆ ಶುಭಹಾರೈಸಿ ಮಾತನಾಡಿದರು.
ಕಾರ್ಮಿಕ ವರ್ಗವು ಶ್ರಮಜೀವಿ ವರ್ಗವಾಗಿದ್ದು, ಅವರ ಮಕ್ಕಳ ಶಿಕ್ಷಣ ಹಾಗೂ ಕಲ್ಯಾಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ರಾಜ್ಯ ಸರ್ಕಾರ ಕಾರ್ಮಿಕರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಬಜೆಟ್ ಅಧಿವೇಶನದಲ್ಲಿ ಕಾರ್ಮಿಕರ ವಸತಿ ಶಾಲೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ ಎಂದು ಮಾಹಿತಿ ನೀಡಿದರು..
Kshetra Samachara
01/05/2026 07:32 pm
LOADING...