ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

​ಗದಗ: ಕುಡಿಯುವ ನೀರಿಗಾಗಿ ಪರದಾಟ..!

ಗದಗ: ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದ್ದು ಪ್ರತಿನಿತ್ಯ ನೀರಿಗಾಗಿ ಪರದಾಟ ನಡೆಸುವ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ತಿಮ್ಮಾಪುರ ಗ್ರಾಮದಲ್ಲಿ ಐತಿಹಾಸಿಕ ಕೆರೆಯ ನೀರನ್ನು ಕುಡಿಯಲು ಉಪಯೋಗಿಸುತ್ತಿದ್ದರು. ಆದ್ರೆ ಈಗ ಆ ಕೆರೆ ಸಂಪೂರ್ಣ ಬತ್ತಿಹೋಗಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಇನ್ನೂ ಉಳ್ಳವರು ಟ್ಯಾಂಕರ್ ಮೂಲಕ ನೀರು ಸಂಗ್ರಹಿಸಿಕೊಳ್ಳುತ್ತಿದ್ದು, ಬಡವರು ಖಾಲಿ ಕೊಡ ಹಿಡಿದು ನೀರಿಗಾಗಿ ಅಲೆದಾಡುತ್ತಿದ್ದಾರೆ. ಪ್ರತಿದಿನ ಕೆಲಸ ಕಾರ್ಯ ಬಿಟ್ಟು ನೀರಿಗಾಗಿ ಓಡಾಡುವ ದುಸ್ಥಿತಿ ಎದುರಾಗಿದೆ.ಕೂಡಲೇ ಗ್ರಾಂ. ಪಂ ಅಧಿಕಾರಿಗಳು ಎಚ್ಚೆತ್ತುಕೊಂಡು ತಿಮ್ಮಾಪುರ ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕಿದೆ.

ಸುರೇಶ ಎಸ್ ಲಮಾಣಿ ಪಬ್ಲಿಕ್ ನೆಕ್ಸ್ಟ್ ಗದಗ

Edited By : Vinayak Patil
PublicNext

PublicNext

01/05/2026 08:08 pm

Cinque Terre

15.75 K

Cinque Terre

0

ಸಂಬಂಧಿತ ಸುದ್ದಿ