ಬೆಳಗಾವಿ: ಬುದ್ಧ, ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾನ್ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ದೇಶದಲ್ಲಿ ಸಕಾರಾತ್ಮಕ ಬದಲಾವಣೆ ಸಾಧ್ಯ ಎಂದು ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಆಸೀಫ್ (ರಾಜು) ಸೇಠ್ ಅವರು ತಿಳಿಸಿದರು.
ನಗರದ ಸದಾಶಿವ ನಗರದಲ್ಲಿನ ಬುದ್ಧ ವಿಹಾರದಲ್ಲಿ ಮೇ.1 (ಶುಕ್ರವಾರ) ಶ್ರೀ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮನುಷ್ಯನು ಸ್ವಾರ್ಥಕ್ಕೊಳಗಾಗುತ್ತಿದ್ದಾನೆ. ಮನುಷ್ಯ ತನ್ನ ಸ್ವಾರ್ಥವನ್ನು ಬಿಟ್ಟು ಅಶಕ್ತರಿಗೆ ಸಹಾಯ ಮಾಡುವುದೇ ಬುದ್ಧರಿಗೆ ನಾವು ಸಲ್ಲಿಸುವ ನಿಜವಾದ ಗೌರವವಾಗಿದೆ.
ಗೌತಮ ಬುದ್ಧರ ಉದಾತ್ತ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಶಾಂತಿಯುತ ಸಮಾಜದ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು.
ಮಹಾಪುರುಷರ ಆಶಯಗಳು ಕೇವಲ ಭಾಷಣಕ್ಕೆ ಸೀಮಿತವಾಗದೆ, ನಮ್ಮ ದೈನಂದಿನ ಬದುಕಿನ ದಾರಿಯಾಗಬೇಕು. ಆಗ ಮಾತ್ರ ನಾವೆಲ್ಲರೂ ನಿಜವಾದ ಪರಿವರ್ತನೆಯ ಹಾದಿಯಲ್ಲಿ ಸಾಗಲು ಸಾಧ್ಯ ಎಂದು ಶಾಸಕರಾದ ಆಸೀಫ್(ರಾಜು) ಸೇಠ್ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ನಗರ ಸೇವಕ ಸಂದೀಪ ಜೀರಗ್ಯಾ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಬೆಳಗಾವಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಬಸವರಾಜ ಚನ್ನಣ್ಣವರ, ಬೆಳಗಾವಿ ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿ ನಾಮದೇವ ಬಿಲ್ಕರ್, ಸಮಾಜದ ಮುಖಂಡರಾದ ಮಲ್ಲೇಶ್ ಚೌಗಲೆ, ಶಾಂತಪ್ಪ ಹಾದಿಮನಿ, ದುರ್ಗೇಶ್ ಮೇತ್ರಿ, ಭಾರತೀಯ ಬೌದ್ಧ ಮಹಾಸಭಾ ಬೆಳಗಾವಿ ಅಧ್ಯಕ್ಷರಾದ ಯಮನಪ್ಪ ಗಡಿನಾಯಕ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಉಪನ್ಯಾಸಕ ಪ್ರೊ. ಮಹಾಂತೇಶ್ ಚಲವಾದಿ, ಮಾರ್ಕೆಟ್ ಪೊಲೀಸ್ ಠಾಣೆಯ ಸಿ ಪಿ ಐ ಜೆ. ಎಂ. ಕಾಲಿಮಿರ್ಚಿ, ಭಾರತೀಯ ಬೌದ್ಧ ಮಹಾಸಭಾ ಸಮತಾ ಸೈನಿಕ ದಳದ ಮೇಜರ್ ಜನರಲ್ ಯಶವಂತ್ ಸಾಮ್ರಾಟ್ ಸೇರಿದಂತೆ ಸಮಾಜದ ಗಣ್ಯರು, ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.
PublicNext
01/05/2026 10:03 pm
LOADING...