ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾವೇರಿ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಮಹಿಳೆಯರ ಗೌರವಕ್ಕೆ ಅಪಮಾನ ಮಾಡಿದ ಆರೋಪ ಗಿರೀಶ್ ಮಟ್ಟಣ್ಣನವರ್ ಮೇಲಿದೆ.
ಯೂಟ್ಯೂಬ್ ಚಾನೆಲ್ ಮೂಲಕ ಪ್ರಸಾರವಾದ ವಿಡಿಯೋದಲ್ಲಿ, ಗಿರೀಶ್ ಮಟ್ಟಣ್ಣನವರ್ ಧರ್ಮಸ್ಥಳ ಹಾಗೂ ಅಲ್ಲಿ ಮದುವೆಯಾದ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಹೇಳಿಕೆಗಳು 2023ರ ಡಿಸೆಂಬರ್ 4ರಂದು ಉಜಿರೆಯಲ್ಲಿ ನಡೆದ ಜನಾಂದೋಲನ ಕಾರ್ಯಕ್ರಮದಲ್ಲಿ ಗಿರೀಶ್ ಮಾಡಿದ ಭಾಷಣದ ಭಾಗವಾಗಿದ್ದು, ನಂತರ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾಗಿತ್ತು.
PublicNext
01/05/2026 11:03 pm
LOADING...