ಶಿರಸಿ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಆರಾಧ್ಯ ದೇವರಾದ ಶ್ರೀ ಲಕ್ಷ್ಮೀನೃಸಿಂಹ ದೇವರ ವಾರ್ಷಿಕ ರಥೋತ್ಸವವು ಭಕ್ತಿ, ಸಂಪ್ರದಾಯ ಮತ್ತು ಭಾವೈಕ್ಯದ ವಾತಾವರಣದಲ್ಲಿ ಅತ್ಯಂತ ವೈಭವದಿಂದ ಸಂಪನ್ನಗೊಂಡಿತು. ಸಾವಿರಾರು ಭಕ್ತರು ಭಾಗವಹಿಸಿ ಶ್ರೀದೇವರ ಕೃಪೆಗೆ ಪಾತ್ರರಾದರು.ದೇವರಿಗೆ ಮಹಾಪೂಜೆ, ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಧ್ವಜಸ್ಥಾಪನೆ, ಅನ್ನಪೂರ್ಣೇಶ್ವರಿ ಪೂಜೆ, ವೇದಘೋಷ, ಮಂಗಳಾರತಿ ಹಾಗೂ ಭಜನಾ ಕಾರ್ಯಕ್ರಮಗಳು ಭಕ್ತಿಭಾವವನ್ನು ಹೆಚ್ಚಿಸಿತು. ಮಠದ ಆವರಣವು ವಿದ್ಯುತ್ ದೀಪಾಲಂಕಾರ ಮತ್ತು ಹೂವಿನ ಅಲಂಕಾರಗಳಿಂದ ಕಂಗೊಳಿಸುತ್ತಿತ್ತು.
ಮಠಾಧೀಶರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ಹಾಗೂ ಶ್ರೀ ಆನಂದಬೋಧೇಂದ್ರ ಸರಸ್ವತೀ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ರಥೋತ್ಸವ ನಡೆಯಿತು.ರಾತ್ರಿ ವಿಶೇಷ ಆಕರ್ಷಣೆಯಾಗಿದ್ದ ಶ್ರೀ ದೇವರ ರಥೋತ್ಸವ ಭಕ್ತರ ಜಯಘೋಷಗಳ ನಡುವೆ ನಡೆಯಿತು.ರಥಾರೂಢನಾದ ಶ್ರೀ ಲಕ್ಷ್ಮೀನೃಸಿಂಹ ದೇವರ ದರ್ಶನ ಪಡೆಯಲು ಭಕ್ತರು ಮುಗಿಬಿದ್ದರು. ರಾತ್ರಿ 11 ಗಂಟೆಗೆ ರಥಾರೂಢನಾದ ದೇವರ ರಥೋತ್ಸವ 11:30 ಕ್ಕೆ ಆರಂಭವಾಯಿತು. ರಾತ್ರಿ 1 ಗಂಟೆ ವೇಳೆಗೆ ರಥ ವಾಪಸ್ಸಾಯಿತು. ರಥೋತ್ಸವದಲ್ಲಿ ಸಂಭ್ರಮದ ಬಾಣಬಿರುಸುಗಳು ಆಕಾಶವನ್ನು ಬೆಳಗಿಸಿದವು.
ತಾಳ, ವಾದ್ಯಗಳ ನಿನಾದ, ಭಕ್ತರ ಜಯಘೋಷದ ನಡುವೆ ರಥೋತ್ಸವವು ಮನಸೆಳೆಯಿತು.ಈ ರಥೋತ್ಸವದ ಮತ್ತೊಂದು ವಿಶೇಷತೆ ಎಂದರೆ ಸರ್ವಧರ್ಮೀಯರ ಸಹಕಾರ. ಹಿಂದು ಸಮುದಾಯದೊಂದಿಗೆ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಜನರೂ ಉತ್ಸವದ ವಿವಿಧ ವ್ಯವಸ್ಥೆಗಳಲ್ಲಿ ಕೈಜೋಡಿಸಿದ್ದು, ನಿಜಾರ್ಥದಲ್ಲಿ ಇದು ಭಾವೈಕ್ಯತೆಯ ರಥೋತ್ಸವವಾಗಿ ಮೂಡಿಬಂತು
Kshetra Samachara
02/05/2026 07:09 am
LOADING...