ಬೆಂಗಳೂರು: ರಾಜ್ಯ ರಾಜಕಾರಣದ ಚದುರಂಗದಾಟದ ನಡುವೆ ಇಂದು ಒಂದು ಪ್ರಮುಖ ಬೆಳವಣಿಗೆ ನಡೆದಿದೆ. ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ನೀಡಿದ್ದಾರೆ.
ತಮ್ಮ ಭೇಟಿಯ ಕುರಿತು ಸಾಮಾಜಿಕ ಜಾಲತಾಣ 'X' ನಲ್ಲಿ ಫೋಟೋ ಹಂಚಿಕೊಂಡಿರುವ ಬಿ.ಎಸ್.ವೈ, "ಆತ್ಮೀಯರಾದ ಶ್ರೀ ಬಿ.ಎಲ್. ಸಂತೋಷ್ ಜೀ ಅವರು ಇಂದು ನಮ್ಮ ಮನೆಗೆ ಸೌಹಾರ್ದಯುತ ಭೇಟಿ ನೀಡಿ ನನ್ನೊಂದಿಗೆ ಉಪಹಾರ ಸೇವಿಸಿದರು" ಎಂದು ಬರೆದುಕೊಂಡಿದ್ದಾರೆ. ಬಿ.ಎಲ್. ಸಂತೋಷ್ ಅವರು ರಾಷ್ಟ್ರಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ ಎಂದು ಯಡಿಯೂರಪ್ಪ ಅವರು ಈ ಸಂದರ್ಭದಲ್ಲಿ ಶ್ಲಾಘಿಸಿದ್ದಾರೆ.
ಮೇಲ್ನೋಟಕ್ಕೆ ಇದು ಕೇವಲ ಸೌಹಾರ್ದಯುತ ಭೇಟಿಯಂತೆ ಕಂಡರೂ, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸದ್ಯ ದೇಶದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಈ ಭೇಟಿಯ ವೇಳೆ ಚುನಾವಣಾ ರಣತಂತ್ರ ಮತ್ತು ಸಂಘಟನೆಯ ಬಗ್ಗೆ ಮಹತ್ವದ ಚರ್ಚೆಗಳು ನಡೆದಿವೆ ಎಂದು ವಿಶ್ಲೇಷಿಸಲಾಗುತ್ತಿದೆ.
PublicNext
02/05/2026 01:07 pm
LOADING...