ಶಿಡ್ಲಘಟ್ಟ : ತಾಲೂಕಿನ ಬಶೆಟ್ಟಹಳ್ಳಿ ಹೋಬಳಿಯ ವಲಸೇನಹಳ್ಳಿ ಗ್ರಾಮದ ರಾಜನಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರಿನ ಗೆರಿಗಿರೆಡ್ಡಿಪಾಳ್ಯದ ರಾಮು ಕುಟುಂಬಸ್ಥರು ದಿಬ್ಬೂರಹಳ್ಳಿ ಗ್ರಾಮದ ನೆಂಟರ ಮನೆಗೆ ಬಂದಾಗ ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಗಂಗಯ್ಯ ಎಂಬ ಹದಿಮೂರು ವರ್ಷದ ಯುವಕ ನೀರಲ್ಲೇ ಮುಳುಗಿ ಸಾವನ್ನಪ್ಪಿರುವ ಘಟನೆ ದಿಬ್ಬೂರಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕುಟುಂಬ ಸಮೇತ ಕೆರೆಯಲ್ಲಿ ಮೀನು ಹಿಡಿಯಲು ಹೋದಾಗ ಯುವಕ ನೀರಿನಲ್ಲಿ ಮುಳುಗಿದಾಗ ತಕ್ಷಣವೇ ಅಗ್ನಿಶಾಮಕ ದಳ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ತಿಳಿಸಿರುತ್ತಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ ಮಣ್ಣಿನಲ್ಲಿ ಸಿಲುಕಿಕೊಂಡಿದ್ದ ಯುವಕ ನನ್ನ ಮೇಲೆತ್ತಲಾಗಿದೆ. ಯುವಕನ ಮೃತ ದೇಹ ಮೇಲೆ ಎತ್ತುವಷ್ಟರಲ್ಲಿ ಪ್ರಾಣ ಹಾರಿಹೋಗಿತ್ತು. ಯುವಕನ ಮೃತ ದೇಹ ನೋಡುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇನ್ನು ಯುವಕನ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಈ ಪ್ರಕರಣ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ಚಿಕ್ಕತೇಕಹಳ್ಳಿ ಡಿ ಶಿವಕುಮಾರ್ ಪಬ್ಲಿಕ್ ನೆಕ್ಸ್ಟ್ ಚಿಕ್ಕಬಳ್ಳಾಪುರ
PublicNext
02/05/2026 03:44 pm