ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ಡಾಲಿ ಧನಂಜಯ್ ಮತ್ತು ಪತ್ನಿ ಡಾ. ಧನ್ಯತಾ ದಂಪತಿ ಇದೀಗ ಪೋಷಕರಾಗಿದ್ದಾರೆ. ಈ ದಂಪತಿಗೆ ಗಂಡು ಮಗು ಜನಿಸಿದ್ದು, ಡಾಲಿ ಧನಂಜಯ್ ಅವರು ಈ ಸಿಹಿ ಸುದ್ದಿಯನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಈ ಸಂತಸದ ಸುದ್ದಿ ಹೊರಬೀಳುತ್ತಿದ್ದಂತೆಯೇ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
ಕಳೆದ ಕೆಲ ದಿನಗಳ ಹಿಂದಷ್ಟೇ ಡಾಲಿ ಧನಂಜಯ್ ಮತ್ತು ಡಾ. ಧನ್ಯತಾ ದಂಪತಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಘೋಷಿಸಿದ್ದರು. ಬೇಬಿ ಬಂಪ್ ಫೋಟೋಶೂಟ್ ಮಾಡಿಸಿ, ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ "Our universe is expanding" ಎಂದು ಬರೆದುಕೊಂಡು ಅಭಿಮಾನಿಗಳಿಗೆ ಈ ಸಂತಸದ ಸುದ್ದಿ ತಲುಪಿಸಿದ್ದರು.
ಡಾಲಿ ಧನಂಜಯ್ ಡಾ. ಧನ್ಯತಾ ಅವರೊಂದಿಗೆ 2025ರ ಫೆಬ್ರವರಿ 16ರಂದು ಮೈಸೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆ ಮತ್ತು ಆರತಕ್ಷತೆ ಸಮಾರಂಭಗಳಿಗೆ ಕನ್ನಡ ಚಿತ್ರರಂಗ ಹಾಗೂ ರಾಜಕೀಯ ಕ್ಷೇತ್ರದ ಹಲವು ಗಣ್ಯರು ಹಾಜರಾಗಿ ನವದಂಪತಿಗೆ ಶುಭ ಹಾರೈಸಿದ್ದರು.
PublicNext
02/05/2026 04:08 pm
LOADING...