ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

Breaking: ಛತ್ತೀಸ್‌ಗಢದಲ್ಲಿ ಐಇಡಿ ಸ್ಫೋಟ - ನಕ್ಸಲರ ಕರಾಳ ಕೃತ್ಯಕ್ಕೆ ಮೂವರು DRG ಜವಾನರಿಗೆ ಗಾಯ

ರಾಯ್‌ಪುರ್‌: ಛತ್ತೀಸ್‌ಗಢದ ಕಾಂಕೇರ್ ಜಿಲ್ಲೆಯಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ವೇಳೆ ಸಂಭವಿಸಿದ ಭೀಕರ ಐಇಡಿ (IED) ಸ್ಫೋಟದಲ್ಲಿ ಮೂವರು ಜಿಲ್ಲಾ ಮೀಸಲು ಪಡೆಯ (DRG) ಜವಾನರು ಗಾಯಗೊಂಡಿದ್ದಾರೆ.

ನಾರಾಯಣಪುರ ಜಿಲ್ಲೆಯ ಗಡಿಭಾಗದ ದಟ್ಟ ಅರಣ್ಯದಲ್ಲಿ ನಕ್ಸಲರು ಅಳವಡಿಸಿದ್ದ ಸ್ಫೋಟಕಗಳನ್ನು ಪತ್ತೆಹಚ್ಚಿ ನಿಷ್ಕ್ರಿಯಗೊಳಿಸುವ (Demining) ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ತೊಡಗಿದ್ದಾಗ ಈ ದುರಂತ ಸಂಭವಿಸಿದೆ. ಕಾಂಕೇರ್‌ನ ಛೋಟೆಬೆತಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸ್ಫೋಟ ಸಂಭವಿಸಿದ್ದು, ಗಾಯಗೊಂಡ ಜವಾನರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆಯ ಬಳಿಕ ಭದ್ರತಾ ಪಡೆಗಳು ಆ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ.

Edited By : Vijay Kumar
PublicNext

PublicNext

02/05/2026 04:25 pm

Cinque Terre

9.41 K

Cinque Terre

0

ಸಂಬಂಧಿತ ಸುದ್ದಿ