ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ-ಧಾರವಾಡಕ್ಕೆ 'ಬೃಹತ್' ಪಾಲಿಕೆ ಸ್ಥಾನಮಾನ: ಅಭಿವೃದ್ಧಿಗೆ ಹೊಸ ದಿಕ್ಸೂಚಿ : ಈರೇಶ ಅಂಚಟಗೇರಿ

ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯನ್ನು ಬೃಹತ್ ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಬಹುಮತದಿಂದ ಅಂಗೀಕಾರ ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಭಾ ನಾಯಕ ಈರೇಶ ಅಂಚಟಗೇರಿ ತಿಳಿಸಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸದಸ್ಯರು ಈ ವಿಷಯದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕ ಮಾಡುವುದರಿಂದ ಬಹಳಷ್ಟು ಸಮಸ್ಯೆಗಳು ಉಂಟಾಗುತ್ತವೆ. ಗ್ರಾಮೀಣ ಭಾಗದ ಹಳ್ಳಿಗಳನ್ನು ಮಹಾನಗರ ಪಾಲಿಕೆ ಸೇರಿಸುವುದರಿಂದ ಬಹಳಷ್ಟು ತೊಂದರೆ ಉಂಟಾಗಲಿದೆ ಎಂದು ತಿಳಿಸಿದರು.

ಬೆಂಗಳೂರು ಮಾದರಿಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪಡಿಸಬೇಕು. ವೇಗವಾಗಿ ಬೆಳೆಯುತ್ತಿರುವ ಕೈಗಾರಿಕೆಗಳು ಹಾಗೂ ನಗರೀಕರಣ ಮತ್ತು ಹೆಚ್ಚುತ್ತಿರುವ ನಾಗರಿಕ ಸೇವಾ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Edited By : Somashekar
Kshetra Samachara

Kshetra Samachara

02/05/2026 04:26 pm

Cinque Terre

13.46 K

Cinque Terre

0

ಸಂಬಂಧಿತ ಸುದ್ದಿ