ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಅಂಬಲಪಾಡಿ ಮೇಲ್ಸೇತುವೆ ಮೇ 15 - 20ರೊಳಗೆ ಪ್ರಯಾಣಕ್ಕೆ ಮುಕ್ತ - ಸಂಸದ ಕೋಟ

ಉಡುಪಿ: ಸಾರ್ವಜನಿಕರು, ಪ್ರಯಾಣಿಕರು ಹಾಗೂ ಮಾಧ್ಯಮ ಮಿತ್ರರಿಂದ ನಿರಂತರವಾಗಿ ಗಮನ ಸೆಳೆದಿದ್ದ ಉಡುಪಿಯ ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಅಂತಿಮ ಹಂತ ತಲುಪಿದೆ. ಈ ಕಾಮಗಾರಿಯ ಪ್ರಗತಿಯನ್ನು ವಾರಕ್ಕೊಮ್ಮೆ ಪರಿಶೀಲಿಸಿ, ಕಾರ್ಯಕ್ಕೆ ವೇಗ ನೀಡಲು ತಾನು ವೈಯಕ್ತಿಕವಾಗಿ ಶ್ರಮಿಸಿದ್ದಾಗಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ಈ ಪ್ರಯತ್ನದ ಫಲವಾಗಿ, ಇದೀಗ ಮೇಲ್ಸೇತುವೆಯ ಭಾಗಶಃ ನಿರ್ಮಾಣ ಕಾರ್ಯ ಮುಗಿದಿದ್ದು, ಮೇ 15 ಅಥವಾ ಮೇ 20ರೊಳಗೆ ಸಂಚಾರಕ್ಕೆ ಮುಕ್ತಗೊಳಿಸಲು ಯೋಜಿಸಲಾಗಿದೆ ಎಂದು ಅವರು ಹೇಳಿದರು.

ಕಳೆದ ಎರಡು ವರ್ಷಗಳಿಂದ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಿಗೆ ಸಂಬಂಧಿಸಿದ ಬಹುತೇಕ ಕಾಮಗಾರಿಗಳನ್ನು ಪೂರ್ಣಗೊಳಿಸಲು ತಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು. ಈಗಾಗಲೇ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಮತ್ತು ಸಂತೆಕಟ್ಟೆ ಅಂಡರ್‌ಪಾಸ್ ಸೇರಿದಂತೆ ಹಲವು ಪ್ರಮುಖ ಕಾಮಗಾರಿಗಳು ಸಂಚಾರಕ್ಕೆ ಮುಕ್ತಗೊಂಡಿವೆ. ಕಟಪಾಡಿ ಮೇಲ್ಸೇತುವೆ ಕಾಮಗಾರಿ ನಿಗದಿತ ಸಮಯಕ್ಕಿಂತ ಮುಂಚೆಯೇ ಪೂರ್ಣಗೊಳ್ಳುತ್ತಿದ್ದು, ಅದರ ಒಂದು ಭಾಗ ಈಗಾಗಲೇ ಸಂಚಾರಕ್ಕೆ ತೆರೆಯಲಾಗಿದೆ. ಇದಲ್ಲದೆ, ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಕಾಮಗಾರಿಗಳು ಸಹ ಪ್ರಗತಿಯಲ್ಲಿವೆ. ಜಿಲ್ಲೆಯ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ಸುಸಜ್ಜಿತವಾಗಿ ಮತ್ತು ಸುಗಮ ಸಂಚಾರಕ್ಕೆ ಯೋಗ್ಯವಾಗಿಡುವುದು ತಮ್ಮ ಮುಖ್ಯ ಉದ್ದೇಶ ಎಂದು ಅವರು ಸ್ಪಷ್ಟಪಡಿಸಿದರು.

Edited By : Vijay Kumar
PublicNext

PublicNext

02/05/2026 04:47 pm

Cinque Terre

8.87 K

Cinque Terre

0

ಸಂಬಂಧಿತ ಸುದ್ದಿ