ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: 30 ಹಾಸಿಗೆಗಳ ನೂತನ ಸಮುದಾಯ ಆರೋಗ್ಯ ಕೇಂದ್ರ ಉದ್ಘಾಟಿಸಿದ ಸಚಿವ ಎಂ.ಬಿ ಪಾಟೀಲ್

ದೇವರಹಿಪ್ಪರಗಿ: ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಸಮುದಾಯ ಆರೋಗ್ಯ ಕೇಂದ್ರವನ್ನು ಸಚಿವ ಎಂ.ಬಿ ಪಾಟೀಲ್ ಉದ್ಘಾಟಿಸಿದರು.

ಆಧುನಿಕ ಸೌಲಭ್ಯಗಳಿಂದ ಸಜ್ಜುಗೊಂಡ 30 ಹಾಸಿಗೆಗಳ ಆಸ್ಪತ್ರೆ ಇದಾಗಿದ್ದು, ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಶಕ್ತಿಯುತ ಆಧಾರವಾಗಲಿದೆ ಎಂದು ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ಶಾಸಕ ರಾಜುಗೌಡ ಪಾಟೀಲ್, ಪಟ್ಟಣ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ವೈದ್ಯರು-ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Edited By : Nagaraj Tulugeri
PublicNext

PublicNext

02/05/2026 04:49 pm

Cinque Terre

7.83 K

Cinque Terre

0

ಸಂಬಂಧಿತ ಸುದ್ದಿ