ಧಾರವಾಡ: ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರು ಅಪರಾಧಿ ಎಂದು ಪರಿಗಣಿಸಲ್ಪಟ್ಟ ಹಿನ್ನೆಲೆಯಲ್ಲಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಹೀಗಾಗಿ ಧಾರವಾಡ ಗ್ರಾಮೀಣ ಕ್ಷೇತ್ರ-71 ಖಾಲಿಯಾಗಿದೆ.
ಈ ಕುರಿತು ಆದೇಶ ಹೊರಡಿಸಿರುವ ಕರ್ನಾಟಕ ವಿಧಾನಸಭೆ ಕಾರ್ಯದರ್ಶಿಗಳು, ವಿನಯ್ ಕುಲಕರ್ಣಿ ದೋಷಿ ಎಂದು ಘೋಷಿಸಿದ ಪರಿಣಾಮವಾಗಿ, ಅವರು ಶಿಕ್ಷೆಗೊಳಗಾದ ದಿನಾಂಕದಿಂದ ಅಂದರೆ ಏಪ್ರಿಲ್ 15, 2026 ರಿಂದ ಕರ್ನಾಟಕ ವಿಧಾನಸಭೆಯ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ. 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 8ರ ಪ್ರಕಾರ ಭಾರತ ಸಂವಿಧಾನದ 191(1)(e) ವಿಧಿಯ ನಿಬಂಧನೆಗಳ ಪ್ರಕಾರ ಮತ್ತು ಅಂತಹ ಅನರ್ಹತೆಯು ಅವರ ಬಿಡುಗಡೆಯ ನಂತರ ಆರು ವರ್ಷಗಳ ಅವಧಿಗೆ ಮುಂದುವರಿಯುತ್ತದೆ. ಆದರೆ ಸಮರ್ಥ ನ್ಯಾಯಾಲಯವು ಶಿಕ್ಷೆಗೆ ತಡೆ ನೀಡದ ಹೊರತು. ಆದ್ದರಿಂದ, ಕರ್ನಾಟಕ ವಿಧಾನಸಭೆಯ ಒಂದು ಸ್ಥಾನ ಖಾಲಿಯಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
PublicNext
02/05/2026 04:59 pm
LOADING...