ಮುಲ್ಕಿ: ಶಾಸಕ ಉಮಾನಾಥ ಕೋಟ್ಯಾನ್ ರವರು ಶನಿವಾರ ರಾಷ್ಟ್ರೀಯ ಹೆದ್ದಾರಿ ಕಾರ್ನಾಡ್ ಬೈಪಾಸ್ ಬಳಿ ಸುಮಾರು ಎರಡು ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಹಂತದಲ್ಲಿರುವ ಲೋಕೋಪಯೋಗಿ ಇಲಾಖೆಯ ನಿರೀಕ್ಷಣಾ ಮಂದಿರಕ್ಕೆ ಭೇಟಿ ನೀಡಿ, ಕಾಮಗಾರಿಯ ಪ್ರಗತಿಯನ್ನು ವೀಕ್ಷಿಸಿದರು.
ಈ ಸಂದರ್ಭ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ವಸಂತ್ ರಾಜ್ ಕಾಮಗಾರಿ ಬಗ್ಗೆ ಶಾಸಕರಿಗೆ ಮಾಹಿತಿ ನೀಡಿ ನಿರೀಕ್ಷಣಾ ಮಂದಿರದ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದೆ, ಕಟ್ಟಡಕ್ಕೆ ನೂತನ ಪೀಠೋಪಕರಣಗಳ ಕಾಮಗಾರಿ ಟೆಂಡರ್ ಕರೆಯಲಾಗಿದ್ದು ತಾಂತ್ರಿಕ ಪರಿಶೀಲನೆಯಲ್ಲಿದೆ, ಅನುಮೋದನೆ ದೊರೆತ ಕೂಡಲೇ ಕಾಮಗಾರಿ ನಡೆಸಲಾಗುವುದು ಎಂದರು.
ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಆದಷ್ಟು ಬೇಗ ನಿರೀಕ್ಷಣಾ ಮಂದಿರದ ಉಳಿದ ಕಾಮಗಾರಿಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ.
ರಾಷ್ಟ್ರೀಯ ಹೆದ್ದಾರಿಯಿಂದ ನಿರೀಕ್ಷಣಾ ಮಂದಿರಕ್ಕೆ ಸಂಪರ್ಕ ರಸ್ತೆ ,ಹಾಗೂ ಕಟ್ಟಡದ ಎದುರು ಭಾಗದಲ್ಲಿ ಕಾಂಕ್ರೀಟ್ ಹಾಕುವ ಮೂಲಕ ಸುಸಜ್ಜಿತವಾಗಿ ಕಾಮಗಾರಿ ನಡೆಸಲು ಸೂಚನೆ ನೀಡಿದ್ದೇನೆ ಎಂದರು.
ಈ ಸಂದರ್ಭ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸುನಿಲ್ ಆಳ್ವ, ಮುಲ್ಕಿ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಸತೀಶ್ ಅಂಚನ್,ಮಾಜಿ ಸದಸ್ಯ ಶೈಲೇಶ್ ಕುಮಾರ್, ಬಿಜೆಪಿ ನಾಯಕರಾದ ರಂಗನಾಥ ಶೆಟ್ಟಿ, ಅಶೋಕ್ ಜನನಿ ಗುತ್ತಿಗೆದಾರ ಲಾಯ್ಡ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
02/05/2026 06:37 pm
LOADING...