ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ದೇವರಹಿಪ್ಪರಗಿ ಪ್ರಾಥಮಿಕ ಆರೋಗ್ಯ ಕೇಂದ್ರ, ಪಟ್ಟಣ ಪಂಚಾಯಿತಿ ನೂತನ ಕಟ್ಟಡ ಉದ್ಘಾಟಿಸಿದ ಸಚಿವ ಎಂ.ಬಿ.ಪಾಟೀಲ

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದಲ್ಲಿ ಸಚಿವ ಎಂ.ಬಿ. ಪಾಟೀಲ್ ಅವರು ಎರಡು ಪ್ರಮುಖ ನೂತನ ಕಟ್ಟಡಗಳನ್ನು ಉದ್ಘಾಟಿಸಿದರು. ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೂವತ್ತು ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಿದ ನೂತನ ಕಟ್ಟಡ ಹಾಗೂ ದೇವರಹಿಪ್ಪರಗಿ ಪಟ್ಟಣ ಪಂಚಾಯತಿಯ ನೂತನ ಕಾರ್ಯಾಲಯ ಕಟ್ಟಡವನ್ನು ಅವರು ಲೋಕಾರ್ಪಣೆ ಮಾಡಿದರು. ಈ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಾಭಿವೃದ್ಧಿ ಕೋಶ, ಇಂಜಿನಿಯರಿಂಗ್ ಘಟಕ ಬೆಂಗಳೂರು ಮತ್ತು ಪೌರಾಡಳಿತ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್, ದೇವರಹಿಪ್ಪರಗಿ ಆಸ್ಪತ್ರೆಯನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಿದ್ದರಿಂದ ಈ ಭಾಗದ ಜನತೆಗೆ ಅಪಾರ ಪ್ರಯೋಜನವಾಗಲಿದೆ ಎಂದರು. ಸುಸಜ್ಜಿತವಾಗಿ ನಿರ್ಮಿಸಲಾಗಿರುವ ಈ ಕಟ್ಟಡದಲ್ಲಿ ಐಸಿಯು ಹಾಸಿಗೆಗಳು, ಹೆರಿಗೆ ಮತ್ತು ಮಕ್ಕಳ ಐಸಿಯು ಹಾಸಿಗೆಗಳ ಸೌಲಭ್ಯವಿದೆ ಎಂದು ತಿಳಿಸಿದರು. ವೈದ್ಯರ ಅವಶ್ಯಕತೆಗೆ ಅನುಗುಣವಾಗಿ ಆರೋಗ್ಯ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ದೇವರಹಿಪ್ಪರಗಿ ಮತಕ್ಷೇತ್ರದ ಜೆಡಿಎಸ್ ಶಾಸಕ ರಾಜುಗೌಡ ಪಾಟೀಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಶರಣಪ್ಪ ಸುಣಗಾರ, ದೇವರಹಿಪ್ಪರಗಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಬಸಪ್ಪ ದೇವಣಗಾಂವ, ತಾಲೂಕಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಸಾಹೇಬಗೌಡ ನಿಂಗಪ್ಪ ಬಿರಾದಾರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Edited By :
PublicNext

PublicNext

02/05/2026 06:48 pm

Cinque Terre

12.14 K

Cinque Terre

0

ಸಂಬಂಧಿತ ಸುದ್ದಿ