ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿ: ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆದ ಕು.ಧನ್ಯಾ

ಶಿರಸಿ: ಎಂ ಇ ಎಸ್ ನ ಎಂ ಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಬಿಎಸ್ಸಿ ಪದವಿ ವಿದ್ಯಾರ್ಥಿನಿ ಧನ್ಯಾ ಗಣಪತಿ ಹೆಗಡೆ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ನಡೆಸಿದ ಪದವಿ ಪರೀಕ್ಷೆಯಲ್ಲಿ ಬಿಎಸ್ಸಿ ಪ್ರಥಮ ವರ್ಷಕ್ಕೆ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾಳೆ.

ಇವಳು ಶಿರಸಿ ತಾಲೂಕಿನ ಮುಂಡತೋಟದ ಗಣಪತಿ ಹೆಗಡೆ ಹಾಗೂ ಜ್ಯೋತಿ ಹೆಗಡೆ ಇವರ ಪುತ್ರಿ.ಇವಳ ಈ ಸಾಧನೆಗೆ ಎಂಇಎಸ್ ನ ಅಧ್ಯಕ್ಷ ಜಿ ಎಂ ಹೆಗಡೆ ಮುಳಖಂಡ,ಕಾಲೇಜು ಉಪಸಮಿತಿ ಅಧ್ಯಕ್ಷ ಎಸ್ ಕೆ ಭಾಗವತ್ ಪ್ರಾಚಾರ್ಯ ಪ್ರೊ ಜಿ ಟಿ ಭಟ್, ಬೋಧಕ ಬೋಧಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತ ಪಡಿಸಿದ್ದಾರೆ.

Edited By : PublicNext Desk
PublicNext

PublicNext

02/05/2026 08:23 pm

Cinque Terre

4.01 K

Cinque Terre

0