ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿಗ್ಗಾವಿ: ಅಂಗನವಾಡಿ ನೇಮಕಾತಿಯಲ್ಲಿ ಅಕ್ರಮ ಆರೋಪ; ಗ್ರಾಮಸ್ಥರಿಂದ ಕೇಂದ್ರಕ್ಕೆ ಬೀಗ!

​ಶಿಗ್ಗಾವಿ: ಶಿಗ್ಗಾವಿ ತಾಲೂಕಿನ ಹನುಮರಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಶಿಕ್ಷಕಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಗ್ರಾಮಸ್ಥರು ಅಂಗನವಾಡಿ ಕೇಂದ್ರಕ್ಕೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

​ಹನುಮರಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರ ಸಂಖ್ಯೆ 29ರಲ್ಲಿ ಕಳೆದ ಆರು ತಿಂಗಳಿಂದ ಶಿಕ್ಷಕಿ ಹುದ್ದೆ ಖಾಲಿ ಇತ್ತು. ಈ ಹುದ್ದೆಗೆ ಅದೇ ಗ್ರಾಮದ ಮಹಿಳೆಯೊಬ್ಬರು ಅರ್ಜಿ ಸಲ್ಲಿಸಿದ್ದರು. ಆದರೆ, ಅಧಿಕಾರಿಗಳು ನಿಯಮ ಬಾಹಿರವಾಗಿ ಬೇರೆ ಊರಿನ ಮಹಿಳೆಯನ್ನು ನೇಮಕ ಮಾಡಿದ್ದಾರೆ ಎಂಬುದು ಗ್ರಾಮಸ್ಥರ ಪ್ರಮುಖ ಆರೋಪ.

​ನೇಮಕಗೊಂಡಿರುವ ಮಹಿಳೆಯು ನಕಲಿ ದಾಖಲೆಗಳನ್ನು ಸೃಷ್ಟಿಸಿ ಅರ್ಜಿ ಸಲ್ಲಿಸಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. ಈ ಬಗ್ಗೆ ಈಗಾಗಲೇ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದರೂ, ಯಾವುದೇ ಪರಿಶೀಲನೆ ನಡೆಸದೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

​ಸ್ಥಳಕ್ಕೆ ಭೇಟಿ ನೀಡಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ (CDPO) ಗಣೇಶ್ ಅವರಿಗೆ ಗ್ರಾಮಸ್ಥರು ಘೇರಾವ್ ಹಾಕಿದರು. "ಅಕ್ರಮ ನೇಮಕಾತಿಯನ್ನು ತಕ್ಷಣವೇ ರದ್ದುಪಡಿಸಬೇಕು, ಅಲ್ಲಿಯವರೆಗೆ ಅಂಗನವಾಡಿ ಬೀಗ ತೆಗೆಯುವುದಿಲ್ಲ" ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

Edited By :
PublicNext

PublicNext

02/05/2026 08:30 pm

Cinque Terre

16.21 K

Cinque Terre

0

ಸಂಬಂಧಿತ ಸುದ್ದಿ