ಶಿರಸಿ: ಕಾರ್ಮಿಕರ ಹಿತರಕ್ಷಣೆ ನಮ್ಮ ಆದ್ಯತೆ.ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಅನನ್ಯವಾದುದು. ಬೆವರು ಸುರಿಸಿ ದುಡಿಯುವ ಪ್ರತಿಯೊಬ್ಬ ಕಾರ್ಮಿಕನಿಗೂ ಸಾಮಾಜಿಕ ಭದ್ರತೆ ಮತ್ತು ಗೌರವ ಸಿಗಬೇಕು ಎನ್ನುವುದು ಸರ್ಕಾರದ ಆಶಯವಾಗಿದೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ನಗರದ ಕೈಗಾರಿಕಾ ಭವನದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟ (ರಿ) ಇವರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 'ಕಾರ್ಮಿಕರ ದಿನಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಲ್ಲದೆ ಅಸಂಘಟಿತ ವಲಯದ ಕಾರ್ಮಿಕರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಬಾರದು. ಕಾರ್ಮಿಕ ಇಲಾಖೆಯ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೂ ತಲುಪುವಂತಾಗಲು ಸಂಘಟನೆಗಳು ಶ್ರಮಿಸಬೇಕು ಎಂದು ಶಾಸಕರು ಕರೆ ನೀಡಿದರು.
ಮತ್ತು ಕಾರ್ಮಿಕರ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ವಿಮಾ ಸೌಲಭ್ಯಗಳ ಕುರಿತು ಶಾಸಕರು ಮಾಹಿತಿ ನೀಡುತ್ತಾ, ಕಾರ್ಮಿಕ ಒಕ್ಕೂಟದ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ಪದಾಧಿಕಾರಿಗಳು ಕಾರ್ಮಿಕರ ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಶಾಸಕರಿಗೆ ಮನವಿ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಾರ್ಮಿಕ ಮುಖಂಡರು, ಒಕ್ಕೂಟದ ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯಲ್ಲಿ ಅಸಂಘಟಿತ ವಲಯದ ಕಾರ್ಮಿಕರು ಉಪಸ್ಥಿತರಿದ್ದರು.
Kshetra Samachara
02/05/2026 08:39 pm
LOADING...