ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮೇ ಅಂತ್ಯದೊಳಗಾಗಿ ಡಾಂಬರೀಕರಣ ಕಾಮಗಾರಿಗಳನ್ನು ಪೂರ್ಣಗೊಳಿಸಿ - ಮಹೇಶ್ವರ್ ರಾವ್

ಬೆಂಗಳೂರು: ಬೆಂಗಳೂರು ಪಶ್ಚಿಮ ಹಾಗೂ ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಡಾಂಬರೀಕರಣ ಕಾಮಗಾರಿಗಳನ್ನು ಮೇ ಅಂತ್ಯದೊಳಗಾಗಿ ಪೂರ್ಣಗೊಳಿಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು ಪಶ್ಚಿಮ ಹಾಗೂ ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗಳು ಹಾಗೂ ಮಳೆಗಾಲಕ್ಕೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಇಂದು ಆಯಾ ನಗರ ಪಾಲಿಕೆಗಳ ಕಚೇರಿಗಳಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರದ ಅನುದಾನದಡಿ ನಗರದ ಪ್ರಮುಖ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳು ಹಾಗೂ ವಾರ್ಡ್‌ಗಳ ಡಾಂಬರೀಕರಣ ಮತ್ತು ಸಮಗ್ರ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಪಾದಚಾರಿ ಮಾರ್ಗಗಳು ಹಾಗೂ ಚರಂಡಿ ಕಾಮಗಾರಿಗಳನ್ನು ಆದ್ಯತೆಯಿಂದ ಪೂರ್ಣಗೊಳಿಸಿ, ಡಾಂಬರೀಕರಣ ಕಾಮಗಾರಿಗಳನ್ನು ಮೇ ಅಂತ್ಯದೊಳಗಾಗಿ ಮುಕ್ತಾಯಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈಗಾಗಲೇ ರಸ್ತೆ ಡಾಂಬರೀಕರಣ ಪೂರ್ಣಗೊಂಡಿರುವ ಸ್ಥಳಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಬೇಕು. ಜೊತೆಗೆ, ಪ್ರಗತಿಯಲ್ಲಿರುವ ಕಾಮಗಾರಿಗಳ ಮೇಲ್ವಿಚಾರಣೆ ನಡೆಸಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಈ ವೇಳೆ ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ, ರವಿ, ರಾಜೇಶ್, ಸ್ವಯಂಪ್ರಭಾ, ಅಧೀಕ್ಷಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು, ಗುತ್ತಿಗೆದಾರರು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Vijay Kumar
PublicNext

PublicNext

02/05/2026 08:59 pm

Cinque Terre

3.57 K

Cinque Terre

0

ಸಂಬಂಧಿತ ಸುದ್ದಿ