ಮಡಿಕೇರಿ: ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಆರ್ಥಿಕ ಸಹಕಾರ ನೀಡುವುದಾಗಿ ಭರವಸೆ ನೀಡಿದ ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ಮನ್ ಸುಖ್ ಮಾಂಡವಿಯಾ ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.
ನಾಪೋಕ್ಲುವಿನ ಚೆರಿಯಪರಂಬು ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ 26 ದಿನಗಳ ಕಾಲ ನಡೆದ ಹಾಕಿ ಉತ್ಸವ ಫೈನಲ್ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಹಿಂದೆ ಕೊಡವ ಕುಟುಂಬ ಹಾಕಿ ಕ್ರೀಡೆ ಬಗ್ಗೆ ಕೇಳಿದ್ದೆ. ಈಗ ನೋಡಿ ಸಂತೋಷವಾಯಿತು. ಅಂತರರಾಷ್ಟ್ರೀಯ ಒಲಿಂಪಿಕ್ ಕೌನ್ಸಿಲ್ ಕ್ರೀಡೆ ಒಂದು ಸಮುದಾಯದ ಒಗ್ಗೂಡುವಿಕೆಗೆ ಸಹಕಾರಿಯಾಗಬೇಕು ಎಂದಿದೆ. ಆದರೆ ಕೊಡವ ಸಮುದಾಯದ ಪೂರ್ವಜರು ಇದನ್ನು ಈ ಹಿಂದೆ ಮಾಡಿ ತೋರಿಸಿದ್ದಾರೆ ಇದು ಶ್ಲಾಘನೀಯ ಎಂದರು.
18 ಜನ ಒಲಿಂಪಿಯನ್ ನೀಡಿದ ಈ ಕೊಡವ ಭೂಮಿಗೆ ವಂದನೀಯ ಎಂದರು. ಕ್ರೀಡಾ ಪ್ರತಿಭೆಗಳಿರುವ ಕೊಡಗಿಗೆ ಪ್ರೋತ್ಸಾಹ ನೀಡುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜವಾಬ್ದಾರಿ ಎಂದು ಸಚಿವರು ಹೇಳಿದರು.
ಕ್ರೀಡೆ ಎನ್ನುವುದು ರಾಜಕೀಯ ಮೈದಾನ ಅಲ್ಲ. ಸರ್ಕಾರ ಸರ್ಕಾರದ ನಡುವೆ ಸಹಯೋಗ ಇರಬೇಕು. ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿ ದೇಶಕ್ಕೆ ಮಾದರಿಯಾಗಿದ್ದು, ಇದನ್ನು ಇಡೀ ದೇಶಕ್ಕೆ ಪರಿಚಯ ಮಾಡುತ್ತೇನೆ. ಶೂಟಿಂಗ್ ಗೂ ಪ್ರೋತ್ಸಾಹ ನೀಡುತ್ತೇನೆ. ಇಂತಹ ಕ್ರೀಡೆಯಲ್ಲಿ ಉತ್ತಮ ಕೌಶಲ್ಯ ಹೊಂದಿರುವ ಪ್ರತಿಭೆಗಳನ್ನು ಆಯ್ಕೆಮಾಡಿ ತರಬೇತಿ ನೀಡಿದರೆ ದೇಶಕ್ಕೆ ಮಾದರಿಯಾಗುತ್ತದೆ. ಇದು ಹೊಸ ದಿಕ್ಕನ್ನು ನೀಡುವ ಕ್ಷಣವಾಗಿದೆ ಎಂದು ಶ್ಲಾಘಿಸಿದರು.
PublicNext
03/05/2026 07:34 am
LOADING...