ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಪೋಸ್ಟಲ್ ಬ್ಯಾಲೆಟ್ ಮರು ಎಣಿಕೆ ಪ್ರಕ್ರಿಯೆಯ ಬಗ್ಗೆ ಸಿ.ಟಿ ರವಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಕರ್ನಾಟಕ ಹೈಕೋರ್ಟ್ ಆದೇಶದಂತೆ ಈ ಮರು ಎಣಿಕೆ ನಡೆಯುತ್ತಿದ್ದು ಚುನಾವಣಾ ಆಯೋಗವು ಯಾವುದೇ ಒತ್ತಡಕ್ಕೆ ಒಳಗಾಗದೆ, ನಿಷ್ಪಕ್ಷಪಾತವಾಗಿ ಮತ್ತು ಪಾರದರ್ಶಕವಾಗಿ ಎಣಿಕೆ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕವು ಪಾರದರ್ಶಕ ಚುನಾವಣೆಗೆ ಹೆಸರಾಗಿದ್ದು, ಆ ಪರಂಪರೆಯನ್ನು ಉಳಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. ಮರು ಎಣಿಕೆಯ ಫಲಿತಾಂಶ ಏನೇ ಬಂದರೂ ಅದನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸಲು ಸಿದ್ಧವಿರುವುದಾಗಿ ರವಿ ಅವರು ಸ್ಪಷ್ಟಪಡಿಸಿದ್ದಾರೆ. ಆದರೆ, ಎಣಿಕೆ ಪ್ರಕ್ರಿಯೆಯಲ್ಲಿ ಆದ ವಿಳಂಬದ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಇದು ಸಾರ್ವಜನಿಕರಲ್ಲಿ ಅನುಮಾನ ಮತ್ತು ಆತಂಕಕ್ಕೆ ಕಾರಣವಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಹಿಂದೆ ನಡೆದ ಪ್ರಕರಣಗಳಲ್ಲಿ ಕೆಲವೇ ಗಂಟೆಗಳಲ್ಲಿ ಎಣಿಕೆ ಮುಗಿದಿತ್ತು, ಆದರೆ ಈ ಎಣಿಕೆ ಇಷ್ಟು ತಡವಾಗುತ್ತಿದೆ ಎಂಬುದು ತಿಳಿದಿಲ್ಲ ಒಂದು ವೇಳೆ ಎಣಿಕೆಯಲ್ಲಿ ಏನಾದರೂ ಅಕ್ರಮ ನಡೆದಿದೆ ಎಂದು ಕಂಡುಬಂದಲ್ಲಿ, ಅದನ್ನು ಪ್ರಶ್ನಿಸಲು ಕಾನೂನಿನಡಿ ಅವಕಾಶವಿದೆ ಎಂದು ಅವರು ಈ ಸಂದರ್ಭದಲ್ಲಿ ನೆನಪಿಸಿದ್ದಾರೆ.
PublicNext
03/05/2026 09:08 am
LOADING...