ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ಕಮರ್ಷಿಯಲ್ ಸಿಲಿಂಡರ್ ದರ ಏರಿಕೆ ಖಂಡಿಸಿ ಪ್ರತಿಭಟನೆ

ಚಾಮರಾಜನಗರ : ವಾಣಿಜ್ಯ ಸಿಲಿಂಡರ್ ದರ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ದ ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವ ನಗರದ ಶ್ರೀ ಭುವನೇಶ್ವರಿ ವೃತ್ತದಲ್ಲಿ ಸಿಲಿಂಡರ್ ಹಿಡಿದು ಜಮಾಯಿಸಿದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು

ಕೇಂದ್ರ ಸರ್ಕಾರ ಪಂಚರಾಜ್ಯಗಳ ಚುನಾವಣಾ ಬಳಿಕ‌ ಸಿಲಿಂಡರ್ ದರ ಏರಿಕೆ ಮಾಡಿದೆ ಏಕಾಏಕಿ ಕಮರ್ಷಿಯಲ್ ಸಿಲಿಂಡರ್ ಒಂದಕ್ಕೆ 991ರೂ. ಏರಿಕೆ ಮಾಡಿ ಹೋಟೆಲ್ ಉದ್ಯಮಿಗಳ ಹಾಗೂ ಸಾರ್ವಜನಿಕರ ಮೇಲೆ ಪಡೆಯುವ ಕೆಲಸಕ್ಕೆ ಮುಂದಾಗಿದೆ. ಚುನಾವಣೆಗೂ ಮುನ್ನಾ ಸಿಲಿಂಡರ್ ದರ ಏರಿಕೆ ಮಾಡಿದ್ದರೆ ಜನ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಿದ್ದರು. ಆದರೆ ಕೇಂದ್ರ ಸರ್ಕಾರ ಹಿಂಬದಿಯ ರಾಜಕಾರಣ ಮಾಡಿಕೊಂಡು ಬರುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದರು.

ಯಾವುದೇ ಚುನಾವಣೆಗಳಿಗೂ ಮುನ್ನಾ ಬಿಜೆಪಿ ಸರ್ಕಾರಕ್ಕೆ ಜನರನ್ನು ಎದುರಿಸುವ ಶಕ್ತಿ ಇಲ್ಲ. ಯುದ್ದದ ಬಿಸಿ ತಣ್ಣಗಾ ದರೂ ಕೇಂದ್ರ ಸರ್ಕಾರ ದರ ಏರಿಕೆಯಲ್ಲಿ ನಿರತವಾಗಿದೆ. ಕೇಂದ್ರ ಸರ್ಕಾರ ಕೂಡಲೇ ಬೆಲೆ ಏರಿಕೆ ಕೈಬಿಡ ಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Edited By : PublicNext Desk
Kshetra Samachara

Kshetra Samachara

03/05/2026 12:45 pm

Cinque Terre

1.92 K

Cinque Terre

0

ಸಂಬಂಧಿತ ಸುದ್ದಿ