ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹೊರವಲಯದಲ್ಲಿರುವ ಐತಿಹಾಸಿಕ ತುಂಗಭದ್ರಾ ಜಲಾಶಯಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ, ನೂತನವಾಗಿ ನಿರ್ಮಿಸಲಾದ 33 ಕ್ರಸ್ಟ್ ಗೇಟ್‌ಗಳ ಕಾಮಗಾರಿಯನ್ನು ಪರಿಶೀಲಿಸಿದರು. ಈ ವೇಳೆ ಅವರು ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳಿಂದ ಜಲಾಶಯದ ಕ್ರಸ್ಟ್ ಗೇಟ್‌ಗಳ ಕುರಿತು ಸಮಗ್ರ ಮಾಹಿತಿ ಪಡೆದರು. ಅಲ್ಲದೆ, ಕ್ರಸ್ಟ್ ಗೇಟ್‌ಗಳ ಯಶಸ್ವಿ ಪ್ರಾಯೋಗಿಕ ಕಾರ್ಯಾಚರಣೆ (ಟ್ರಯಲ್ ರನ್) ವೀಕ್ಷಿಸಿದರು.
ಉದ್ಘಾಟನೆ ಕುರಿತು ಡಿಸಿಎಂ ಹೇಳಿಕೆ
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಜಲಾಶಯಕ್ಕೆ 33 ಕ್ರಸ್ಟ್ ಗೇಟ್‌ಗಳನ್ನು ಅಳವಡಿಸಲಾಗಿದ್ದು, ಸಣ್ಣಪುಟ್ಟ ಕೆಲಸಗಳು ಮಾತ್ರ ಬಾಕಿ ಉಳಿದಿವೆ. ಇವುಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು. **ಮೇ 15ರಂದು ಬೃಹತ್ ಕಾರ್ಯಕ್ರಮದ ಮೂಲಕ ಕ್ರಸ್ಟ್ ಗೇಟ್‌ಗಳನ್ನು ಉದ್ಘಾಟಿಸಲು ನಾವು ಯೋಜನೆ ಹಾಕಿದ್ದೇವೆ.** ಮೇ 15ರೊಳಗೆ ಎಲ್ಲಾ ಕಾಮಗಾರಿಗಳನ್ನು ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಡಿಸಿಎಂ ಜೊತೆಗಿದ್ದ ಗಣ್ಯರು
ಜಲಾಶಯದ ವೀಕ್ಷಣೆ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಬೋಸ್‌ರಾಜ್, ಶಿವರಾಜ್ ತಂಗಡಗಿ, ಸಂಸದ ಇ. ತುಕಾರಾಂ, ಕೊಪ್ಪಳ ಸಂಸದ ರಾಜಶೇಖರ್ ಹಿಟ್ನಾಳ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಹಾಗೂ ಹಿರಿಯ ಅಧಿಕಾರಿಗಳು ಸಾಥ್ ನೀಡಿದರು.
PublicNext
03/05/2026 01:45 pm
LOADING...