ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

WATCH: ಬಂಗಾಳದಲ್ಲಿ ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಕಿಡಿಗೇಡಿಗಳ ಅಟ್ಟಹಾಸ - ಬಿಜೆಪಿ ನಾಯಕನ ಮನೆ ಮೇಲೆ ಗುಂಡಿನ ಸುರಿಮಳೆ!

ನೋವಾಪಾರ, ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ನೋವಾಪಾರದಲ್ಲಿ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಭೀತಿ ಆವರಿಸಿದೆ. ಶನಿವಾರ ತಡರಾತ್ರಿ ಬಿಜೆಪಿ ಸಾಂಘಿಕ ಜಿಲ್ಲಾ ಕಾರ್ಯದರ್ಶಿ ಕುಂದನ್ ಸಿಂಗ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಇಡೀ ಪ್ರದೇಶದಲ್ಲಿ ಆತಂಕ ಮನೆಮಾಡಿದೆ.

ಬೈಕಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಕುಂದನ್ ಸಿಂಗ್ ಅವರ ಮನೆಯ ಮುಂದೆ ನಿಂತು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದೃಶ್ಯಗಳು ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

"ರಾತ್ರಿ ಆಕಾಶ್ ಚೌಧರಿ ಮತ್ತು ಅಮನ್ ಎಂಬ ಇಬ್ಬರು ವ್ಯಕ್ತಿಗಳು ನನ್ನ ಮನೆಯ ಮುಂದೆ ಬಂದು ಶಸ್ತ್ರಾಸ್ತ್ರಗಳನ್ನು ಹೊರತೆಗೆದು ಗುಂಡು ಹಾರಿಸಿದರು. ಈ ಭಾಗದಲ್ಲಿ ತೃಣಮೂಲ ಕಾಂಗ್ರೆಸ್ ಸೋಲುವ ಭೀತಿಯಲ್ಲಿ ಇಂತಹ ಕೃತ್ಯ ಎಸಗಲಾಗುತ್ತಿದೆ. ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವುದು ಅವರ ಉದ್ದೇಶ, ಆದರೆ ನಾವು ಇಂತಹ ಬೆದರಿಕೆಗಳಿಗೆ ಮಣಿಯುವುದಿಲ್ಲ," ಎಂದು ಕುಂದನ್ ಸಿಂಗ್ ಆಕ್ರೋಶ ಹೊರಹಾಕಿದ್ದಾರೆ.

ಮಾಜಿ ಸಂಸದ ಮತ್ತು ಬಿಜೆಪಿ ನಾಯಕ ಅರ್ಜುನ್ ಸಿಂಗ್ ಅವರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. "ಆರೋಪಿಗಳಾದ ಅಮನ್ ಮತ್ತು ಆಕಾಶ್ ಈ ಹಿಂದೆಯೇ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದರು. ಚುನಾವಣಾ ಫಲಿತಾಂಶದ ಮತ ಎಣಿಕೆ ಕೇಂದ್ರಕ್ಕೆ ಬಿಜೆಪಿ ಸದಸ್ಯರು ಹೋಗಬಾರದು ಎಂಬ ಕಾರಣಕ್ಕೆ ಈ ಭಯೋತ್ಪಾದನೆ ನಡೆಸಲಾಗುತ್ತಿದೆ. ಸಿಸಿಟಿವಿ ದೃಶ್ಯಗಳಿದ್ದರೂ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳದಿರುವುದು ಆಡಳಿತದ ವೈಫಲ್ಯವನ್ನು ತೋರಿಸುತ್ತದೆ," ಎಂದು ಅವರು ದೂರಿದ್ದಾರೆ.

ಈ ಗಂಭೀರ ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಬ್ಯಾರಕ್‌ಪೋರ್ ಪೊಲೀಸ್ ಕಮಿಷನರೇಟ್‌ನ ಡಿಸಿ (ಉತ್ತರ) ವಾಶಿಮ್ ಖಾನ್, ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಬಂಧಿತರನ್ನು ಇಂದು ಬ್ಯಾರಕ್‌ಪೋರ್ ಉಪವಿಭಾಗ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಮತ್ತು ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೋರಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಪ್ರಸ್ತುತ ನೋವಾಪಾರ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.

Edited By : Nagaraj Tulugeri
PublicNext

PublicNext

03/05/2026 08:49 pm

Cinque Terre

47.49 K

Cinque Terre

1

ಸಂಬಂಧಿತ ಸುದ್ದಿ