ರಾಯಚೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ನಟ ಕಿಚ್ಚ ಸುದೀಪ್ ಅವರು ಪಾಲ್ಗೊಂಡಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಈ ಅವಘಡ ಸಂಭವಿಸಿದೆ.
ವೇದಿಕೆಯಲ್ಲಿದ್ದ ವೈಯರ್ ಬಟ್ಟೆಗೆ ಹಾಗೂ ಸ್ಪೀಕರ್‌ಗೆ ತಾಕಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.
PublicNext
03/05/2026 08:53 pm
LOADING...