ಹಡಗಲಿ : ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನ ಮದಲಗಟ್ಟಿಯ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಬಾಲಕ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.
ಕೊಟ್ಟೂರು ತಾಲೂಕಿನ ತೂಲಹಳ್ಳಿ ಗ್ರಾಮದ ನಿವಾಸಿ ಜೀವನ್ (೧೬) ಮೃತ ಬಾಲಕ ಅಂತ ಗುರುತಿಸಲಾಗಿದೆ. ಮದಲಗಟ್ಟಿಯ ಆಂಜನೇಯ ಸ್ವಾಮಿಯ ದರ್ಶನಕ್ಕೆ ಜೀವನ್ ಕುಟುಂಬಸ್ಥರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಜೀವನ್ ನದಿಯಲ್ಲಿ ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿದ್ದಾರೆ. ಜೀವನ್ ನೀರಿನಲ್ಲಿ ಮುಳುಗಿದ್ದನ್ನು ಗಮನಿಸಿದ ಸ್ಥಳೀಯರು ರಕ್ಷಿಸಲು ಪ್ರಯತ್ನಿಸಿದರೂ ನೀರಿನ ಆಳದಲ್ಲಿ ಮುಳುಗಿದ್ದರಿಂದ ದೊರಕಲಿಲ್ಲ. ನಂತರ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಕಾರ್ಯಾಚರಣೆ ನಡೆದ ಜೀವನ್ ಅವರ ಶವವನ್ನು ಹೊರತೆಗೆದಿದ್ದಾರೆ.
PublicNext
03/05/2026 09:46 pm
LOADING...