ಬೆಂಗಳೂರು: ಆಕಾಶದಲ್ಲಿ ಹಾರಾಟ ನಡೆಸಿ ಗಿನ್ನಿಸ್ ದಾಖಲೆ ಮಾಡಿದವರುಂಟು. ನೀರಿನ ಆಳಕ್ಕಿಳಿದು ವಿಶ್ವ ದಾಖಲೆ ಬರೆದವರೂ ಉಂಟು! ಆದರೆ, ಇಲ್ಲಿ ಇಡೀ ರಾಷ್ಟ್ರವೇ ಹೆಮ್ಮೆ ಪಡುವಂಥ ವಿನೂತ ದಾಖಲೆಯೊಂದನ್ನ ಮೇ.2 ರಂದು
ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಬರೆಯಲಾಗಿದ್ದು, ಅದು ಭಾರತದ ಸಾಹಸ ಯಾನದ ಸುವರ್ಣ ಅಧ್ಯಾಯವೆಂದೇ ಕರೆಯಬಹುದು.
ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್ ವರ್ಲ್ಡ್ ರೆಕಾರ್ಡ್’ ನಿರ್ಮಿಸಲಾಗಿದೆ. ಈ ಐತಿಹಾಸಿಕ ಸಾಹಸದಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರ ಪುತ್ರ ಶರತ್ ಅವರು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿದ್ದು ಮತ್ತೊಂದು ವಿಶೇಷ. ಈ ಬೃಹತ್ ಕಾರ್ಯಾಚರಣೆಯಲ್ಲಿ ದೇಶದ ವಿವಿಧ ಭಾಗಗಳ ಸುಮಾರು 200ಕ್ಕೂ ಅಧಿಕ ನುರಿತ ಸ್ಕೂಬಾ ಡೈವರ್‌ಗಳು ಭಾಗವಹಿಸಿದ್ದರು.
ಅಂಡಮಾನ್ ಆಡಳಿತ ಮತ್ತು ಭಾರತೀಯ ರಕ್ಷಣಾ ಪಡೆಗಳ ಸಹಯೋಗದೊಂದಿಗೆ ನಡೆದ ಈ ಅಭಿಯಾನದಲ್ಲಿ 60 × 40 ಚದರ್ ಮೀಟರ್ ವಿಸ್ತೀರ್ಣದ ಬೃಹತ್ ರಾಷ್ಟ್ರಧ್ವಜವನ್ನು ಅಲೆಗಳ ಅಬ್ಬರ ಮತ್ತು ನೀರಿನ ತೀವ್ರ ಒತ್ತಡದ ನಡುವೆಯೂ ಸಮುದ್ರದಾಳದಲ್ಲಿ ಅನಾವರಣಗೊಳಿಸಲಾಯಿತು. ಈ ಸಾಧನೆಯನ್ನು ಗುರುತಿಸಿ ಅಂಡಮಾನ್ ಮತ್ತು ನಿಕೋಬಾರ್‌ನ ಲೆಫ್ಟಿನೆಂಟ್ ಗವರ್ನರ್ ಡಿ.ಕೆ ಜೋಶಿ ಅವರು ಗಿನ್ನೆಸ್ ವಿಶ್ವ ದಾಖಲೆಯ ಪ್ರಮಾಣಪತ್ರವನ್ನು ನೀಡಿ ಗೌರವಿಸಿದ್ದಾರೆಂದು ಅಲ್ಲಿನ ಮೂಲಗಳು ತಿಳಿಸಿವೆ.
PublicNext
03/05/2026 09:49 pm
LOADING...