ಗದಗ: ಗದಗದ ಪ್ರಸಿದ್ಧ ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದಲ್ಲಿ ಭೀಕರ ಅವಘಡವೊಂದು ಸಂಭವಿಸಿದೆ. ಜಾತ್ರೆಯಲ್ಲಿ ಅಳವಡಿಸಲಾಗಿದ್ದ 'ಡ್ಯಾನ್ಸಿಂಗ್ ಫೈ' ಜೋಕಾಲಿ ಆಡುತ್ತಿದ್ದ ಸಂದರ್ಭದಲ್ಲಿ ತಾಂತ್ರಿಕ ದೋಷದಿಂದ ವೀಲ್ ಕಟ್ ಆಗಿ ಸುಮಾರು 10ಕ್ಕೂ ಹೆಚ್ಚು ತೊಟ್ಟಿಲುಗಳು ನೆಲಕ್ಕೆ ಉರುಳಿ ಬಿದ್ದಿವೆ.
ಈ ದುರ್ಘಟನೆಯಲ್ಲಿ ಜೋಕಾಲಿಯಲ್ಲಿದ್ದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಎಂಟು ಮಂದಿಗೆ ಗಾಯಗಳಾಗಿದ್ದು, ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ.
ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳದಲ್ಲಿದ್ದವರು ಗಾಯಾಳುಗಳ ನೆರವಿಗೆ ಧಾವಿಸಿದ್ದಾರೆ. ತಕ್ಷಣವೇ ಆ್ಯಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಗದಗ ಜಿಮ್ಸ್ (GIMS) ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಗದಗ ಶಹರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕೇಸ್ ದಾಖಲಿಸಿದ್ದಾರೆ. ಜಾತ್ರಾ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸದ ಬಗ್ಗೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
PublicNext
03/05/2026 10:24 pm
LOADING...