ದಾವಣಗೆರೆ : ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಗೆ ಜನರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಈ ಬಾರಿ ಕಮಲ ಅರಳುವುದು ಖಚಿತ ಎಂದು ಬಿಜೆಪಿ ಅಭ್ಯರ್ಥಿ ಬಿ.ಜಿ. ಶ್ರೀನಿವಾಸ್ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದು ತಿಂಗಳ ಪ್ರಚಾರದ ವೇಳೆ ಕ್ಷೇತ್ರದಾದ್ಯಂತ ಸಂಚರಿಸಿದಾಗ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಿರುವುದು ಪಕ್ಷಕ್ಕೆ ಪೂರಕವಾಗಲಿದೆ ಎಂದು ಹೇಳಿದರು.
ಕ್ಷೇತ್ರದ ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಮತದಾರರಲ್ಲಿ ಅಪಾರ ಉತ್ಸಾಹ ಕಂಡುಬಂದಿದ್ದು, ಕಾಂಗ್ರೆಸ್ ಏನೇ ಹೇಳಿಕೊಂಡರೂ ಗ್ರಾಮೀಣ ಭಾಗದ ಮತಗಳು ಬಿಜೆಪಿಗೆ ಹೆಚ್ಚು ಲಾಭ ತಂದುಕೊಡಲಿವೆ ಎಂದು ತಿಳಿಸಿದರು. ಈ ಬಾರಿ 5 ರಿಂದ 10 ಸಾವಿರ ಮತಗಳ ಅಂತರದಲ್ಲಿ ಜಯಗಳಿಸುವ ನಿರೀಕ್ಷೆಯಿದ್ದು, ಮತದಾರರ ಆಶೀರ್ವಾದ ನಮಗೆ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಚುನಾವಣೆಯ ಅವಧಿಯಲ್ಲೂ ಸಹಕಾರ ನೀಡಿದ ಪತ್ರಿಕಾ ಮತ್ತು ದೃಶ್ಯ ಮಾಧ್ಯಮದ ಪ್ರತಿನಿಧಿಗಳಿಗೆ ಅವರು ಧನ್ಯವಾದ ಅರ್ಪಿಸಿದರು.
PublicNext
04/05/2026 07:20 am
LOADING...