ದಾವಣಗೆರೆ : ದಕ್ಷಿಣ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಭಾರಿ ಬಹುಮತದೊಂದಿಗೆ ಗೆಲುವು ಸಾಧಿಸಲಿದ್ದಾರೆ ಎಂದು ಸಂಸದೆ ಪ್ರಭಾ ಮಲ್ಲಿಕಾರ್ಜುನ ವಿಶ್ವಾಸ ವ್ಯಕ್ತಪಡಿಸಿದರು.
ಈ ಕುರಿತು ಮಾತನಾಡಿದ ಅವರು, ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಉತ್ತಮ ವಾತಾವರಣ ನಿರ್ಮಾಣವಾಗಿದ್ದು, ಪಕ್ಷದ ಕಾರ್ಯಕರ್ತರು ಹಾಗೂ ಹಿರಿಯ ನಾಯಕರು ನಡೆಸಿದ ಪ್ರಚಾರಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆತಿದೆ ಎಂದರು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದ್ದು, ಅದರಿಂದ ಮತದಾರರಲ್ಲಿ ಕಾಂಗ್ರೆಸ್ ಮೇಲಿನ ನಂಬಿಕೆ ಹೆಚ್ಚಾಗಿದೆ ಎಂದು ಹೇಳಿದರು.ಹಾಗೆಯೇ, ಮಾಜಿ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರು ಈ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಜನಮನದಲ್ಲಿ ಇನ್ನೂ ಜೀವಂತವಾಗಿದ್ದು, ಅದೇ ವಿಶ್ವಾಸದ ಮೇಲೆ ಸಮರ್ಥ್ ಶಾಮನೂರು ಅವರಿಗೆ ಬೆಂಬಲ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.
ಕ್ಷೇತ್ರದ ಜನರು ಬದಲಾವಣೆಯನ್ನು ಬಯಸುತ್ತಿದ್ದು, ಸಮರ್ಥ್ ಶಾಮನೂರು ಅವರಿಗೆ ಸಂಪೂರ್ಣ ಆಶೀರ್ವಾದ ನೀಡಲಿದ್ದಾರೆ. ಅವರು ಭಾರಿ ಬಹುಮತದಿಂದ ಗೆಲುವು ಸಾಧಿಸುವುದು ನಿಶ್ಚಿತ ಎಂದು ಸಂಸದೆ ಪ್ರಭಾ ಮಲ್ಲಿಕಾರ್ಜುನ ಅಭಿಪ್ರಾಯಪಟ್ಟರು.
PublicNext
04/05/2026 07:25 am
LOADING...