ಶಿವಮೊಗ್ಗ: ಪೋಷಕರು ಮಕ್ಕಳ ಮೇಲೆ ಅಪಾರ ಭರವಸೆಯನ್ನು ಇಟ್ಟುಕೊಂಡಿರುವುದರಿಂದ, ವಿದ್ಯಾರ್ಥಿಗಳು ಆ ನಂಬಿಕೆಯನ್ನು ಉಳಿಸಿಕೊಂಡು ಉತ್ತಮ ಶಿಕ್ಷಣದ ಮೂಲಕ ಸುವ್ಯವಸ್ಥಿತ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಸಲಹೆ ನೀಡಿದರು.
ರಿಪ್ಪನ್ ಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ, ಕ್ರೀಡಾ, ರೋವರ್-ರೇಂಜರ್ಸ್ ಹಾಗೂ ಎನ್‌ಎಸ್‌ಎಸ್ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಇಂದಿನ ದಿನಗಳಲ್ಲಿ ಸರ್ಕಾರ ಮತ್ತು ಪೋಷಕರು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ವಿಶೇಷ ಆದ್ಯತೆ ನೀಡುತ್ತಿರುವುದನ್ನು ಉಲ್ಲೇಖಿಸಿದ ಅವರು, ಕುಟುಂಬದ ಸಂಕಷ್ಟಗಳನ್ನು ಮಕ್ಕಳ ಗಮನಕ್ಕೆ ತರದೆ, ಅವರ ಭವಿಷ್ಯಕ್ಕಾಗಿ ಶ್ರಮಿಸುವ ಪೋಷಕರ ತ್ಯಾಗವನ್ನು ವಿದ್ಯಾರ್ಥಿಗಳು ಮರೆಯಬಾರದು ಎಂದು ಹೇಳಿದ ಅವರು, ಅಗತ್ಯಕ್ಕಷ್ಟೇ ಮೊಬೈಲ್ ಬಳಸಿಕೊಂಡು, ಸ್ಪಷ್ಟ ಗುರಿ ಇಟ್ಟು ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
PublicNext
04/05/2026 08:20 am
LOADING...