ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಥಣಿ: ಬೆಲ್ಲದ ಕಾರ್ಖಾನೆಗೆ ಬೆಂಕಿ, 8 ಲಕ್ಷಕ್ಕೂ ಅಧಿಕ ನಷ್ಟ

ಅಥಣಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಜಲಾಲಪುರ ಗ್ರಾಮದಲ್ಲಿ ಬೆಲ್ಲ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ಸುಟ್ಟು ಭಸ್ಮವಾಗಿದೆ. ಗ್ರಾಮದ ಹೊರವಲಯದಲ್ಲಿರುವ ದಿಲೀಪ ಪವಾರ ಅವರಿಗೆ ಸೇರಿದ ಬೆಲ್ಲ ತಯಾರಿಕಾ ಘಟಕದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕೆಲವೇ ಕ್ಷಣಗಳಲ್ಲಿ ಕಾರ್ಖಾನೆಯೊಳಗೆ ವ್ಯಾಪಿಸಿದೆ.

ಶಾರ್ಟ್ ಸರ್ಕ್ಯೂಟ್‌ನಿಂದಲೇ ಬೆಂಕಿ ಅವಘಡ ಸಂಭವಿಸಿರಬಹುದೆಂದು ಶಂಕಿಸಲಾಗಿದ್ದು, ಘಟಕದಲ್ಲಿದ್ದ ಬೆಲ್ಲ, ಕಬ್ಬಿನ ಅವಶೇಷ, ಯಂತ್ರೋಪಕರಣಗಳು ಹಾಗೂ ಇತರೆ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ. ಅವಘಡದಿಂದ ಸುಮಾರು 8 ಲಕ್ಷ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಹರಸಾಹಸಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Manjunath H D
PublicNext

PublicNext

04/05/2026 11:35 am

Cinque Terre

14.83 K

Cinque Terre

0

ಸಂಬಂಧಿತ ಸುದ್ದಿ