ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿಗ್ಗಾವಿ: ಕುನ್ನೂರು ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರು, ಮೂಲಭೂತ ಸೌಲಭ್ಯಕ್ಕಾಗಿ ಪ್ರತಿಭಟನೆ

ವರದಿ: ರಮೇಶ್ ಸೋಮಕ್ಕನವರ್

ಶಿಗ್ಗಾವಿ: ಹಲವು ತಿಂಗಳುಗಳಿಂದ ಸಮರ್ಪಕವಾಗಿ ಕುಡಿಯುವ ನೀರು ಸಿಗುತ್ತಿಲ್ಲ. ಕುಡಿಯುವ ನೀರಿಗೆ ನಿತ್ಯವೂ ಅಲೆದಾಡುವ ಪರದಾಡುವ ಪರಿಸ್ಥಿತಿ ಎದುರಾಗಿದೆ. ಮತ್ತು ಗ್ರಾಮದಲ್ಲಿ ಚರಂಡಿ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿಲ್ಲ. ಇವೆಲ್ಲ ಸಮಸ್ಯೆಗಳನ್ನು ಬಗೆಹರಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಶಿಗ್ಗಾವಿ ತಾಲೂಕಿನ ಕುನ್ನೂರು ಗ್ರಾಮದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಮಳೆಗಾಲದಲ್ಲಿ ಗ್ರಾಮದಲ್ಲಿನ ಗಟಾರಗಳು ತುಂಬಿ ಕೊಳಚೆ ನೀರು ಮನೆಗಳಿಗೆ ನುಗ್ಗುತ್ತದೆ. ಪ್ರತಿ ವರ್ಷ ಇದೇ ಸಮಸ್ಯೆ ಎದುರಿಸುತ್ತಿದ್ದೇವೆ. ಗ್ರಾಮದಲ್ಲಿ ಅನೇಕ ಕೈ ಪಂಪ್‌ಗಳು ಇದ್ದು ಅವುಗಳನ್ನು ದುರಸ್ತಿ ಪಡಿಸಿಲ್ಲ. ಹಾಗೂ ಹದಗೆಟ್ಟ ರಸ್ತೆ ದುರಸ್ತಿಗೆ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ಪ್ರತಿಭಟನೆ ಸ್ಥಳಕ್ಕೆ ಅಧಿಕಾರಿಗಳ ಭೇಟಿ

ಕೂಡಲೇ ಗ್ರಾಮ ಆಡಳಿತ ಅಧಿಕಾರಿ ಬಸವರಾಜ್ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನಾನಿರತ ಗ್ರಾಮಸ್ಥರ ಮನವೊಲಿಸಿದರು. ಗ್ರಾಮಕ್ಕೆ ಶೀಘ್ರವೇ ಮೂಲ ಸೌಲಭ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು.

Edited By : Manjunath H D
PublicNext

PublicNext

04/05/2026 12:29 pm

Cinque Terre

15.74 K

Cinque Terre

0

ಸಂಬಂಧಿತ ಸುದ್ದಿ