ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯ್ ತಂದೆಯಿಂದ ಕಾಂಗ್ರೆಸ್‌ಗೆ ಮೈತ್ರಿ ಆಹ್ವಾನ: ತಮಿಳು ರಾಜಕೀಯದಲ್ಲಿ ಹೊಸ ಮನ್ವಂತರ?

ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಗಮನಾರ್ಹ ಬೆಳವಣಿಗೆಯೊಂದರಲ್ಲಿ, ಇಂಡಿಯಾ ಟುಡೇ ವರದಿಯ ಪ್ರಕಾರ, ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ವಿಜಯ್ ಅವರ ತಂದೆ ಎಸ್.ಎ. ಚಂದ್ರಶೇಖರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಟಿವಿಕೆ ಜೊತೆ ಮೈತ್ರಿ ಮಾಡಿಕೊಳ್ಳುವಂತೆ ಆಹ್ವಾನ ನೀಡಿದ್ದಾರೆ.

ರಾಜ್ಯದಲ್ಲಿ ಬಹುತೇಕ ಅತಂತ್ರ ಫಲಿತಾಂಶದ ಸಾಧ್ಯತೆಗಳು ಹೆಚ್ಚಾಗಿರುವ ಈ ಸಂದರ್ಭದಲ್ಲಿ ಚಂದ್ರಶೇಖರ್ ಅವರ ಈ ಪ್ರಸ್ತಾಪ ಮಹತ್ವ ಪಡೆದುಕೊಂಡಿದೆ. ಕಾಂಗ್ರೆಸ್ ಪಕ್ಷವು ಇತರ ಪಕ್ಷಗಳನ್ನು ಬೆಂಬಲಿಸುವ ಮೂಲಕ ತನ್ನ ಮತಗಳನ್ನು ಕಳೆದುಕೊಂಡಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ರಾಜ್ಯದ ಬದಲಾಗುತ್ತಿರುವ ರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕಾಂಗ್ರೆಸ್ ಮತ್ತೆ ಪುಟಿದೇಳಲು ಹೊಸ ಮೈತ್ರಿ ಅಗತ್ಯವೆಂದು ಅವರು ಪ್ರತಿಪಾದಿಸಿದ್ದಾರೆ.

ತಮಿಳುನಾಡಿನಲ್ಲಿ ಪ್ರಸ್ತುತ ಇರುವ ಚುನಾವಣಾ ಪ್ರವೃತ್ತಿಗಳನ್ನು ಉಲ್ಲೇಖಿಸಿದ ಚಂದ್ರಶೇಖರ್, ಚುನಾವಣೆಯ ನಂತರವೂ ರಾಜಕೀಯ ಮೈತ್ರಿ ಸಾಧ್ಯತೆ ಇದೆ ಎಂದು ಸೂಚಿಸಿದ್ದಾರೆ. ನಟ ವಿಜಯ್ ಅಧಿಕಾರ ಹಂಚಿಕೊಳ್ಳಲು ಸಿದ್ಧರಿದ್ದು, ಟಿವಿಕೆ-ಕಾಂಗ್ರೆಸ್ ಮೈತ್ರಿಯು ಎರಡೂ ಪಕ್ಷಗಳಿಗೆ ಲಾಭದಾಯಕವಾಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Edited By : Nagaraj Tulugeri
PublicNext

PublicNext

04/05/2026 03:02 pm

Cinque Terre

17.69 K

Cinque Terre

1

ಸಂಬಂಧಿತ ಸುದ್ದಿ