ದಾವಣಗೆರೆ: ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ, ಅವರ ಮೊಮ್ಮಗ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಭರ್ಜರಿ ಜಯಗಳಿಸಿದ್ದಾರೆ.
ಈ ಮೂಲಕ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ವರು ಸೋಲನುಭವಿಸಿದ್ದಾರೆ. ರಾಜ್ಯದಲ್ಲಿ ನಡೆದ ಎರಡೂ ಉಪಚುನಾವಣೆಗಳಲ್ಲಿ ಬಿಜೆಪಿ ಪರಾಭವಗೊಂಡಿದ್ದು, ತನ್ನದೇ ಹಿಡಿತದಲ್ಲಿದ್ದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳನ್ನು ಆಡಳಿತಾರೂಢ ಕಾಂಗ್ರೆಸ್ ಮತ್ತೆ ತನ್ನ ತೆಕ್ಕೆಗೆ ಪಡೆದುಕೊಂಡಿದೆ.
ಸಮರ್ಥ್ ಶಾಮನೂರು ಅವರ ಗೆಲುವಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಸಂಭ್ರಮದಿಂದ ವಿಜಯೋತ್ಸವ ಆಚರಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ತಮ್ಮ ಸಂತಸ ವ್ಯಕ್ತಪಡಿಸಿದರು.
ಚುನಾವಣೆಯಲ್ಲಿ ಮುಸ್ಲಿಂ ಮತಗಳು ವಿಭಜನೆಯಾಗಿದ್ದು, ಕಾಂಗ್ರೆಸ್‌ನ ಸುಮಾರು 22 ಸಾವಿರ ಮತಗಳು ಇತರ ಅಭ್ಯರ್ಥಿಗಳ ಪಾಲಾಗಿವೆ ಎಂದು ಕೆಲವರು ಆರೋಪಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಮುಸ್ಲಿಂ ಮುಖಂಡರು, ಮತ ವಿಭಜನೆಗೆ ಕಾರಣರಾದ ಮುಖಂಡರ ವಿರುದ್ಧ ಈಗಾಗಲೇ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಅಮಾನತ್ತನ್ನು ಸಮರ್ಥಿಸಿಕೊಂಡಿದ್ದಾರೆ.
PublicNext
04/05/2026 04:08 pm
LOADING...