ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅನಿರೀಕ್ಷಿತ ಫಲಿತಾಂಶ ಹೊರಬಿದ್ದಿದ್ದು, ಹಾಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಉತ್ತರ ಚೆನ್ನೈನ ಕೊಳತ್ತೂರು ಕ್ಷೇತ್ರದಲ್ಲಿ ಪರಾಭವಗೊಂಡಿದ್ದಾರೆ. ನಟ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಭ್ಯರ್ಥಿ ವಿ.ಎಸ್. ಬಾಬು ವಿರುದ್ಧ ಆಘಾತಕಾರಿ ಸೋಲುಂಡಿದ್ದು, ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷಕ್ಕೆ ಇದು ಭಾರಿ ಹಿನ್ನಡೆಯಾಗಿದೆ. ಉಭಯ ಅಭ್ಯರ್ಥಿಗಳ ನಡುವೆ ಆರಂಭದಿಂದಲೂ ತೀವ್ರ ಪೈಪೋಟಿ ಕಂಡುಬಂದಿತ್ತು.
ಕಳೆದ ಹಲವು ವರ್ಷಗಳಿಂದ ಕೊಳತ್ತೂರು ಕ್ಷೇತ್ರ ಡಿಎಂಕೆಯ ಭದ್ರಕೋಟೆಯಾಗಿತ್ತು. ಎಂ. ಕೆ. ಸ್ಟಾಲಿನ್ 2011ರಿಂದ ನಿರಂತರವಾಗಿ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. 2021ರ ಚುನಾವಣೆಯಲ್ಲಿ ಎಐಎಡಿಎಂಕೆ ಅಭ್ಯರ್ಥಿ ಆದಿ ರಾಜಾರಾಮ್ ವಿರುದ್ಧ 70,000ಕ್ಕೂ ಹೆಚ್ಚು ಮತಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ ಈ ಬಾರಿಯ ವಿಧಾನಸಭಾ ಚುನಾವಣಾ ಫಲಿತಾಂಶ ಡಿಎಂಕೆಗೆ ತೀವ್ರ ಮರ್ಮಾಘಾತ ನೀಡಿದೆ.
PublicNext
04/05/2026 04:36 pm
LOADING...