ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್, ಜಾಮೀನು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಅವರ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ. ದರ್ಶನ್‌ಗೆ ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.
ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ನೇತೃತ್ವದ ಪೀಠವು, ರಾಜ್ಯ ಸರ್ಕಾರ ಹಾಗೂ ವಿಚಾರಣಾಧೀನ ನ್ಯಾಯಾಲಯಕ್ಕೆ ಒಂದು ವಾರದೊಳಗೆ ವಿವರವಾದ ವರದಿ ಸಲ್ಲಿಸಲು ಸೂಚಿಸಿದೆ.
ರಾಜ್ಯ ಸರ್ಕಾರವು ಜೈಲಿನಲ್ಲಿ ದರ್ಶನ್‌ಗೆ ಲಭ್ಯವಿರುವ ಮೂಲಸೌಕರ್ಯಗಳ ಕುರಿತು ಮಾಹಿತಿ ನೀಡಬೇಕಿದೆ. ಅದೇ ವೇಳೆ, ವಿಚಾರಣಾ ನ್ಯಾಯಾಲಯವು ಈವರೆಗೆ ಎಷ್ಟು ಸಾಕ್ಷಿಗಳ ವಿಚಾರಣೆ ನಡೆದಿದೆ ಮತ್ತು ಉಳಿದ ಸಾಕ್ಷಿಗಳ ವಿಚಾರಣೆಗೆ ಎಷ್ಟು ಸಮಯ ಬೇಕಾಗುತ್ತದೆ ಎಂಬುದರ ಬಗ್ಗೆ ವರದಿ ನೀಡಬೇಕು. ದರ್ಶನ್ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿ, "ದರ್ಶನ್‌ಗೆ ಜೈಲಿನಲ್ಲಿ ಯಾವುದೇ ಮೂಲಸೌಕರ್ಯ ನೀಡಿಲ್ಲ, ಅವರನ್ನು ಬೆಳಕು ಇಲ್ಲದ ಸೆಲ್‌ನಲ್ಲಿ ಇರಿಸಲಾಗಿದೆ" ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಈ ವಾದವನ್ನು ಆಲಿಸಿದ ನ್ಯಾಯಾಲಯ, ಸಾಕ್ಷಿಗಳ ವಿಚಾರಣೆಯ ಪ್ರಗತಿಯ ಕುರಿತೂ ಮಾಹಿತಿ ಕೇಳಿರುವುದು ಗಮನಾರ್ಹ.
PublicNext
04/05/2026 04:44 pm
LOADING...