ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಂಚ ರಾಜ್ಯಗಳ ಫಲಿತಾಂಶ ಪ್ರಧಾನಿ ಮೋದಿ ನಾಯಕತ್ವಕ್ಕೆ ಶಕ್ತಿ ತುಂಬುವಂತಿದೆ.!

ಬೆಂಗಳೂರು: ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ದೊಡ್ಡ ಶಕ್ತಿಯನ್ನು ತುಂಬಿದಂತಾಗಿದದ್ದು, ಇದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಅವರ ಮೊದಲ ಚುನಾವಣೆಯೂ ಇದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದರು.

ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶವು ಬಹುದೊಡ್ಡ ಸಂದೇಶವನ್ನು ನೀಡಿದೆ ಎಂದರು. ಇನ್ನು, ರಾಜ್ಯದ ದಾವಣಗೆರೆ ಮತ್ತು ಬಾಗಲಕೋಟೆ ಸೇರಿ ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಕಾರ್ಯಕರ್ತರು ಸಾಕಷ್ಟು ಶ್ರಮ ಹಾಕಿದ್ದಾರೆ.

ದಾವಣಗೆರೆಯಲ್ಲಿ ಬಿಜೆಪಿ ಗೆದ್ದೇ ಗೆಲ್ಲುವ ವಿಶ್ವಾಸ ಇದೆ ಎಂದ ಅವರು, ಬಾಗಲಕೋಟೆಯ ಸೋಲನ್ನು ನಾವು ನಿರೀಕ್ಷಿಸಿರಲಿಲ್ಲ. ಹಿಂದೆ ಕಾಂಗ್ರೆಸ್ ಪಕ್ಷ ಗೆದ್ದಿದ್ದರೂ ಈ ಬಾರಿ ಮತದಾರರು ನಮ್ಮ ಕೈಹಿಡಿಯುತ್ತಾರೆಂಬ ವಿಶ್ವಾಸ ಇತ್ತು ಎಂದು ಬಿ. ವೈ. ವಿಜಯೇಂದ್ರ ಹೇಳಿದರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ.ಸಿ.ಎನ್. ಅಶ್ವಥನಾರಾಯಣ್, ವಿಧಾನಪರಿಷತ್ ಸದಸ್ಯರಾದ ಸಿ.ಟಿ. ರವಿ, ಪ್ರತಾಪ್ ಸಿಂಹ ನಾಯಕ್, ಶಾಸಕ ಹರೀಶ್ ಪೂಂಜಾ ಅವರು ಉಪಸ್ಥಿತರಿದ್ದರು.

Edited By :
PublicNext

PublicNext

04/05/2026 06:08 pm

Cinque Terre

6.21 K

Cinque Terre

0