ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟಿವಿಕೆ ಭರ್ಜರಿ ಗೆಲುವು : ವಿಜಯ್ ಸಂಪುಟದಲ್ಲಿ ನಟಿ ತ್ರಿಶಾ ಕೃಷ್ಣನ್ ಡಿಸಿಎಂ.?

ಚೆನ್ನೈ: ಬಹು ಭಾಷಾ ನಟಿ ತ್ರಿಶಾ ಕೃಷ್ಣನ್ ಹುಟ್ಟುಹಬ್ಬದಂದೇ ತಮಿಳುನಾಡು ವಿಧಾನಸಭೆಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಈ ಚುನಾವಣೆಯಲ್ಲಿ ನಟ ದಳಪತಿ ವಿಜಯ್ ಅವರ 'ತಮಿಳಗ ವೆಟ್ರಿ ಕಳಗಂ (ಟಿವಿಕೆ)' ಪಕ್ಷ 109ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ತಮಿಳುನಾಡಿನಲ್ಲಿ ಸರ್ಕಾರ ರಚನೆ ಬಹುತೇಕ ಖಚಿತವಾಗಿದೆ. ರಾಜಕೀಯ ಪಕ್ಷ ಸ್ಥಾಪಿಸಿದ ಕೇವಲ ಆರು ತಿಂಗಳಲ್ಲೇ ಚೊಚ್ಚಲ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಟಿವಿಕೆ ಪಕ್ಷ ಇತಿಹಾಸ ಸೃಷ್ಟಿಸಿದೆ.

ನಟ ವಿಜಯ್ ಈ ಚುನಾವಣೆಯಲ್ಲಿ ತಿರುಚಿ ಪೂರ್ವ ಮತ್ತು ಪೆರಂಬೂರು ಎಂಬ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಎರಡರಲ್ಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ. ಒಂದು ವೇಳೆ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ, ಅವರು ಒಂದು ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ವಿಜಯ್ ರಾಜೀನಾಮೆಯಿಂದ ತೆರವಾಗುವ ಸ್ಥಾನಕ್ಕೆ ಅವರ ಆಪ್ತ ಗೆಳತಿ, ನಟಿ ತ್ರಿಶಾ ಕೃಷ್ಣನ್ ಅವರು ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಬಲವಾಗಿ ಕೇಳಿಬರುತ್ತಿವೆ. ಅಲ್ಲದೆ, ನಟಿ ತ್ರಿಶಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದರೆ, ಅವರು ಉಪಮುಖ್ಯಮಂತ್ರಿಯಾಗುವ ಸಾಧ್ಯತೆಯೂ ಇದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ಶುರುವಾಗಿದೆ.

ಈ ಊಹಾಪೋಹಗಳಿಗೆ ಪುಷ್ಟಿ ನೀಡುವಂತೆ, ನಟಿ ತ್ರಿಶಾ ಕೃಷ್ಣನ್ ಟಿವಿಕೆ ಅಧ್ಯಕ್ಷ ವಿಜಯ್‌ ಅವರ ನೀಲಾಂಕರೈ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಇಂದು ತ್ರಿಷಾ ಅವರ ಹುಟ್ಟುಹಬ್ಬವಾಗಿದ್ದು, ಬೆಳಗ್ಗೆ ತಿರುಪತಿಯಲ್ಲಿ ದೇವರ ದರ್ಶನ ಪಡೆದು, ಪ್ರಸಾದದೊಂದಿಗೆ ವಿಜಯ್‌ ಮನೆಗೆ ಆಗಮಿಸಿದ್ದರು. ವಿಜಯ್ ಅವರ ನಿವಾಸಕ್ಕೆ ತ್ರಿಶಾ ಪ್ರವೇಶಿಸುವಾಗ ಮಾಧ್ಯಮ ಸಿಬ್ಬಂದಿ ಅವರನ್ನು ಗಮನಿಸಿದ್ದು, ಟಿವಿಕೆ ಪಕ್ಷ ಸರ್ಕಾರ ರಚಿಸಲು ಸಜ್ಜಾಗಿರುವ ಈ ಮಹತ್ವದ ಸಂದರ್ಭದಲ್ಲಿ ಅವರ ಭೇಟಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

Edited By :
PublicNext

PublicNext

04/05/2026 06:37 pm

Cinque Terre

18.38 K

Cinque Terre

0