ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಗಾಳದಲ್ಲಿ ಕೇಸರಿ ಅಲೆ, ಮಮತಾ ಬ್ಯಾನರ್ಜಿ ನಿವಾಸದ ಮುಂದೆ 'ಜೈ ಶ್ರೀರಾಮ್' ಘೋಷಣೆ

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣಾ ಫಲಿತಾಂಶದ ಟ್ರೆಂಡ್ ಬೆನ್ನಲ್ಲೇ ಕೊಲ್ಕತ್ತಾದಲ್ಲಿ ಹೈಡ್ರಾಮಾ ಶುರುವಾಗಿದೆ. ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಮುನ್ನಡೆ ಸಾಧಿಸಿ ಅಧಿಕಾರದತ್ತ ಹೆಜ್ಜೆ ಹಾಕುತ್ತಿದ್ದಂತೆ, ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದ ಮುಂದೆ ಜಮಾಯಿಸಿ ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

ಕೋಲ್ಕತ್ತಾದ ಕಾಲಿಘಾಟ್‌ನಲ್ಲಿರುವ ಮಮತಾ ಬ್ಯಾನರ್ಜಿ ಅವರ ನಿವಾಸದ ಹೊರಭಾಗದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಕೇಸರಿ ಧ್ವಜ ಹಿಡಿದು 'ಜೈ ಶ್ರೀರಾಮ್' ಘೋಷಣೆಗಳನ್ನು ಕೂಗುತ್ತಿದ್ದಾರೆ. ಈ ಹಿಂದಿನ ಚುನಾವಣೆಗಳ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಅವರು ಇದೇ ಘೋಷಣೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ, ಇಂದಿನ ಫಲಿತಾಂಶದಲ್ಲಿ ಬಿಜೆಪಿ ಮೇಲುಗೈ ಸಾಧಿಸುತ್ತಿದ್ದಂತೆ, ದೀದಿ ಅವರ ಮನೆಯ ಮುಂದೆಯೇ ಕಾರ್ಯಕರ್ತರು ಘೋಷಣೆ ಕೂಗುವ ಮೂಲಕ ತಮ್ಮ ವಿಜಯದ ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ.

Edited By :
PublicNext

PublicNext

04/05/2026 06:45 pm

Cinque Terre

8.5 K

Cinque Terre

0