ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿ: ಗ್ರಾಮಸ್ಥರ ಅಹವಾಲು ಆಲಿಸಲು ಜನರ ಮನೆಬಾಗಿಲಿಗೆ ತೆರಳಿದ:ಶಾಸಕ ಭೀಮಣ್ಣ ನಾಯ್ಕ

ಶಿರಸಿ: ಗ್ರಾಮಸ್ಥರ ಅಹವಾಲು ಆಲಿಸಲು ಸೋಮವಾರ ಶಾಸಕ ಭೀಮಣ್ಣ ನಾಯ್ಕ್ ಅವರು

ಭೈರುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೋಂದಾ ಕ್ರಾಸ್ ಬಳಿ ಇರುವ ಕೆಳಗಿನಕೇರಿ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿ ಮಾತನಾಡಿದರು.

ಜನಪ್ರತಿನಿಧಿಗಳು ಕೇವಲ ಚುನಾವಣೆ ಸಮಯದಲ್ಲಿ ಮಾತ್ರವಲ್ಲದೆ, ನಿರಂತರವಾಗಿ ಜನರೊಂದಿಗೆ ಸಂಪರ್ಕದಲ್ಲಿದ್ದಾಗ ಮಾತ್ರ ಕ್ಷೇತ್ರದ ನೈಜ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಅಲ್ಲದೆ ಅವರು ಗ್ರಾಮಸ್ಥರ ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿ ಕೆಲವು ತುರ್ತು ಸಮಸ್ಯೆಗಳ ಕುರಿತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಕೂಡಲೇ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿಯೇ

ಸೂಚಿಸಿ. ಬೇಡಿಕೆಗಳನ್ನು ಮುಂದಿನ ಅನುದಾನದಲ್ಲಿ ಆದ್ಯತೆಯ ಮೇಲೆ ಈಡೇರಿಸುವ ಭರವಸೆ ನೀಡಿದರು.

ಭೈರುಂಬೆ ಪಂಚಾಯತ್ ವ್ಯಾಪ್ತಿಯ ಅಭಿವೃದ್ಧಿಗೆ ನಾನು ಬದ್ಧನಾಗಿದ್ದು,ಬಡವರ ಮತ್ತು ರೈತರ ಧ್ವನಿಯಾಗಿ ನಾನು ಸದಾ ಕೆಲಸ ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಪಂಚಾಯತ್ ಮಾಜಿ ಜನಪ್ರತಿನಿಧಿಗಳು, ಕಾಂಗ್ರೆಸ್ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

04/05/2026 06:46 pm

Cinque Terre

3.74 K

Cinque Terre

0

ಸಂಬಂಧಿತ ಸುದ್ದಿ