ಬೆಳಗಾವಿ: ತೋಟಗಾರಿಕೆ ಇಲಾಖೆಯಿಂದ, ರೈತರಿಂದ ನೇರವಾಗಿ ಗ್ರಾಹಕರಿಗೆ ಗುಣಮಟ್ಟದ ಮಾವಿನ ಹಣ್ಣುಗಳನ್ನು ಯೋಗ್ಯ ದರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುವ ಉದ್ದೇಶದಿಂದ ಈ ವರ್ಷ ಮಾವು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಮೇ.8 ರಿಂದ 10 ವರೆಗೆ ಬೆಳಿಗ್ಗೆ 9 ರಿಂದ ರಾತ್ರಿ 8 ಗಂಟೆಯವರೆಗೆ ನಗರದ ಡ್ಯೂಮ್ ಪಾರ್ಕ್, ಕ್ಲಬ್ ರೋಡಲ್ಲಿ ಹಮ್ಮಿಕೊಳ್ಳಲಾಗಿದೆ.
ವೈಜ್ಞಾನಿಕ ರೀತಿಯಲ್ಲಿ ಹಣ್ಣುಗಳನ್ನು ಕಟಾವು ಮಾಡಿ ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳನ್ನು ನೇರವಾಗಿ ರೈತರಿಂದ ಗ್ರಾಹಕರಿಗೆ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ಸದರಿ ಮೇಳವನ್ನು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಉದ್ಘಾಟಿಸಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಉಪಸ್ಥಿತರಿರುವರು.
ಬೆಳಗಾವಿ ಉತ್ತರ (ವಿಧಾನಸಭೆ) ಶಾಸಕರಾದ ಆಸೀಫ್ (ರಾಜು) ಸೇಠ್‌ರವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು (ಜಿ.ಪಂ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
04/05/2026 06:59 pm
LOADING...