ಶಿರಸಿ: ಸೋಮವಾರ ಹೊರಬಂದಿರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶವು ಭಾರತೀಯ ಜನತಾ ಪಾರ್ಟಿ ಮತ್ತು ಎನ್‌ಡಿಎ ಮೈತ್ರಿಕೂಟದ ಅಭೂತಪೂರ್ವ ಗೆಲುವನ್ನು ಸಾಧಿಸಿದೆ.ವಿಕಸಿತ ಭಾರತ'ದ ಕನಸನ್ನು ನನಸು ಮಾಡಲು ದೇಶದ ಜನತೆ ಬಿಜೆಪಿ ಸಮರ್ಥ ನಾಯಕತ್ವದ ನಂಬಿಕೆ ಇಟ್ಟು ಆಶೀರ್ವದಿಸಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಅಲ್ಲದೆ ರಾಷ್ಟ್ರದ ಐಕ್ಯತೆ, ಅಖಂಡತೆ ಮತ್ತು ರಾಷ್ಟ್ರೀಯತೆಯ ಪರವಾಗಿ ಜನಸಾಮಾನ್ಯರು ಸ್ಪಷ್ಟ ಸಂದೇಶ ನೀಡಿದ್ದಾರೆ. ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದರ್ಶಿತ್ವ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮರ್ಥ ಮಾರ್ಗದರ್ಶನದಲ್ಲಿ ಭಾರತವು ಸದೃಢವಾಗಿ ಮುನ್ನಡೆಯುತ್ತಿರುವುದಕ್ಕೆ ಈ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.
Kshetra Samachara
04/05/2026 07:23 pm
LOADING...