ಚಿಕ್ಕಮಗಳೂರು: ಸಿಲ್ವರ್ ಮರ ಮರಗಸಿ ಮಾಡುವ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರೊಬ್ಬರು ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಕರುಣಾಜನಕ ಘಟನೆ ಚಿಕ್ಕಮಗಳೂರು ತಾಲೂಕಿನ ಕೆರೆಮನೆ ಎಸ್ಟೇಟ್‌ನಲ್ಲಿ ಸಂಭವಿಸಿದೆ.
ಮೃತ ದುರ್ದೈವಿಯನ್ನು ತಮಿಳುನಾಡು ಮೂಲದ ಆರ್ಮುಗಂ (45) ಎಂದು ಗುರುತಿಸಲಾಗಿದೆ. ಇವರು ಬಾಬರ್ ಎಂಬುವರಿಗೆ ಸೇರಿದ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮರ ಕಡಿಯುವ ವೇಳೆ ಹತ್ತಿರದಲ್ಲೇ ಹಾದುಹೋಗಿದ್ದ ವಿದ್ಯುತ್ ಲೈನ್‌ಗೆ ಸ್ಪರ್ಶವಾದ ಪರಿಣಾಮ ಈ ದುರಂತ ನಡೆದಿದೆ ಎನ್ನಲಾಗಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಮಲ್ಲಂದೂರು ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ. ಕಾರ್ಮಿಕನ ಅಕಾಲಿಕ ನಿಧನದಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Kshetra Samachara
04/05/2026 07:57 pm
LOADING...