ಸಿದ್ದಾಪುರ : ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದಲ್ಲಿ ಸೋಮವಾರ ನಡೆದಿದೆ.ವಿರಾಜಪೇಟೆ ಸುಂಕದಕಟ್ಟೆ ನಿವಾಸಿ ನಾಗರಾಜು (41) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಗುಹ್ಯ ದೇವಾಲಯ ಸಮೀಪದ ಕಾವೇರಿ ನದಿಗೆ ಸ್ನಾನಕ್ಕೆಂದು ತೆರಳಿದ್ದ ಇಬ್ಬರ ಪೈಕಿ ನಾಗರಾಜು ಬೃಹತ್ ಗುಂಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮೃತ ನಾಗರಾಜ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗ್ರಾಮಸ್ಥರ ನೆರವಿನೊಂದಿಗೆ ಮೃತದೇಹ ಹೊರ ತೆಗೆದಿದ್ದಾರೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಗಿದೆ.ಘಟನೆ ಸಂಬಂಧ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
PublicNext
04/05/2026 09:45 pm
LOADING...